ಧಾರವಾಡ, ಮೇ.21, ಧಾರವಾಡ ಜಿಲ್ಲೆಯಲ್ಲಿ ಇಂದು ಐದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.ಸೋಂಕಿತ-1505 (06, ಬಾಲಕಿ) ಹಾಗೂ ಸೋಂಕಿತ -1506( 29, ಮಹಿಳೆ) ಇವರಿಬ್ಬರು ತೆಲಂಗಾಣದ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಇನ್ನು ಸೋಂಕಿತ-1507 (09, ಬಾಲಕಿ) ಸೋಂಕಿತ -1508 (24, ಮಹಿಳೆ), ಸೋಂಕಿತ -1509 (35, ಪುರುಷ), ಈ ಮೂವರು ವ್ಯಕ್ತಿಗಳು ಮಹಾರಾಷ್ಟ್ರ, ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಈಗಾಗಲೇ 09 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.