ತುಮಕೂರು, ಜ10,ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಮನಿಕುಪ್ಪೆ ಗ್ರಾಮದಲ್ಲಿ ಶುಕ್ರವಾರ ಚಿರತೆ ದಾಳಿಗೆ ಐದು ವರ್ಷದ ಬಾಲಕ ಬಲಿಯಾಗಿದ್ದಾನೆ.ಮೃತಪಟ್ಟ ಬಾಲಕನನ್ನು ಸಮರ್ಥ್ ಗೌಡ ಎಂದು ಗುರುತಿಸಲಾಗಿದೆ. ನತದೃಷ್ಟ ಬಾಲಕ ತನ್ನ ಅಜ್ಜಿಯೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಚಿರತೆ, ಮೊದಲು ಹಸುವಿನ ಮೇಲೆ ದಾಳಿ ಮಾಡಿದೆ. ನಂತರ ಹಿಂದೆ ನಡೆದು ಬರುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಕಾಡಿನೊಳಕ್ಕೆ ಎಳೆದೊಯ್ದಿದೆ. ಅರಣ್ಯಾಧಿಕಾರಿಗಳು ಶೋಧ ನಡೆಸಿದ ನಂತರ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಂತರ ಬಾಲಕನ ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.