ಪ್ರವಾಹ: ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದ ಡಿಸಿಎಂ

ಬಾಗಲಕೋಟೆ: ರಾಜ್ಯದ ಉಪಮುಖ್ಯಂತ್ರಿಗಳಾದ ಗೋವಿಂದ ಕಾರಜೋಳ ಅವರು ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಪ್ರವಾಹ  ಹಾನಿ ಹಾಗೂ ಪರಿಹಾರ ಕಾಯರ್ಾಚರಣೆ  ಕುರಿತಾದ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು.

 ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಗಲಕೋಟೆ ಹಾಗೂ ಮುಧೋಳ ಜನತೆಯ ಆಶರ್ೀವಾದಿಂದ ನಾನು ಇಂದು ಉಪಮುಖ್ಯಮಂತ್ರಿ ಆಗಿ ಆಯ್ಕೆ ಅಗಿರುವದು ಸಂತಷತಂದಿದ್ದು ಈ ದಿಶೆಯಿಂದ ಜಿಲ್ಲೆಯ ಸಮಸ್ತ ಜನತೆಗೆ  ಅಭಿನಂದನೆ ಸಲ್ಲಿಸುತ್ತೇನೆ ಎಂದರು.

       ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ಪ್ರಹಲ್ಲಾದ ಜೋಶಿ, ಸುರೇಶ ಅಂಗಡಿ, ಸದಾನಂದ ಗೌಡ, ಒಳಗೊಂಡ ತಂಡ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಪ್ರವಾಹದ ಕುರಿತು  45 ನಿಮಿಷಗಳ ಕಾಲ ಸಮಗ್ರವಾಗಿ ಚಚರ್ಿಸಿದ್ದೇವೆ.

        ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು  ರಾಜ್ಯ ಪ್ರವಾಹ  ಬಾಧಿತ ಸ್ಥಳಗಳ ವೀಕ್ಷಣೆ ಮಾಡಿದ್ದಾರೆ ಎಂದರು.

    ಸೆ.7 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರವಾಹಕ್ಕೊಳಗಾದ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ ಎಂದರು.

          ರಾಜ್ಯದಲ್ಲಿ ಪ್ರವಾಹದಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದ್ದು 32 ಸಾವಿರ ಕೋಟಿ ರೂ ಹಾನಿಯಾಗಿದೆ.

       ಹೆಚ್ಚಿನ ಪರಿಹಾರಕ್ಕಾಗಿ ಪ್ರಧಾನ ಮಂತ್ರಿಗ ಮನವಿ ಸಲ್ಲಿಸಲಾಗಿದೆಯೆಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಸಿದ್ದು ಸವದಿ, ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ದುಗರ್ೇಶ ರುದ್ರಾಕ್ಷಿ ಸೇರಿದಂತೆ ಇತರರು ಇದ್ದರು.