ಬೆಳಗಾವಿ: 19 :ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಹರಿಸಿ ಗುಳೇ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಹತ್ತು ಕೋಟಿಗೂ ಹೆಚ್ಚು ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬುಧವಾರ ಬರಪರಿಸ್ಥಿತಿ ಕುರಿತ ಚಚರ್ೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ವಾಷರ್ಿಕ 8.5 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ ಇದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಜನತೆ ಉದ್ಯೋಗಕ್ಕಾಗಿ ಬೇರೆಡೆಗೆ ಗುಳೇ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹತ್ತು ಕೋಟಿಗೂ ಹೆಚ್ಚು ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಿರುವುದಾಗಿ ಅವರು ತಿಳಿಸಿದರು.
ಈಗಾಗಲೇ 6.16 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದ್ದು, ಕಳೆದ ಅಕ್ಟೋಬರ್ ಒಂದು ತಿಂಗಳಲ್ಲಿ 1.2 ಕೋಟಿ ಅತೀ ಹೆಚ್ಚು ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಅವರು ತಿಳಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಪ್ರತಿದಿನವೂ ಆ ದಿನದ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದೆ. ಕಡಿಮೆ ಪ್ರಗತಿ ಸಾಧಿಸಿರುವುದು ಕಂಡು ಬಂದಲ್ಲಿ ತಕ್ಷಣ ಈ ಕುರಿತು ಕಾರಣಗಳನ್ನು ಕೇಳಿ ಬಗೆಹರಿಸುವ ಪ್ರಯತ್ನ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.
ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 2700 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಕೇಂದ್ರ ಸಕರ್ಾರದಿಂದ 500 ಕೋಟಿ ರೂ. ಬಾಕಿ ಇದೆ. ಅಲ್ಲದೇ ಕಳೆದ ಸಾಲಿನಲ್ಲಿ 930 ಕೋಟಿ ರೂ. ಕೇಂದ್ರ ಸಕರ್ಾರದಿಂದ ಬಾಕಿ ಇದ್ದು, ಬಾಕಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಯವರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ ಎಂದು ಸದನದಲ್ಲಿ ಅವರು ಸ್ಪಷ್ಟಪಡಿಸಿದರು.