ದೇಶಪಾಂಡೆ ಪ್ರತಿಮೆಗೆ ಪುಷ್ಪನಮನ
Floral tribute to Deshpande's statue
ಲೋಕದರ್ಶನ ವರದಿ
ಧಾರವಾಡ 04: ಕರ್ನಾಟಕ ವಿದ್ಯಾವರ್ಧಕ ಸಂಘದ 137ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ರಾ.ಹ. ದೇಶಪಾಂಡೆ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಯಿತು. ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ರಾ.ಹ. ದೇಶಪಾಂಡೆ ಅವರ ಕನ್ನಡ ಮತ್ತು ಕರ್ನಾಟಕ ಸೇವೆಯನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸೋಹನ್ ಸುರೇಶ್ ಹೊರಕೇರಿ, ಡಾ. ಸುರೇಶ್ ಡಿ. ಹೊರಕೇರಿ, ಎನ್.ಎಸ್. ಕಾಶಪ್ಪನವರ, ರಾಜೇಶ್ ಕೋರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಇತಿಹಾಸ ಹಾಗೂ ಕನ್ನಡದ ಬೆಳವಣಿಗೆಗೆ ರಾ.ಹ. ದೇಶಪಾಂಡೆ ಅವರ ಕೊಡುಗೆಯನ್ನು ಸ್ಮರಿಸಲಾಯಿತು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 