ಕೊಪ್ಪಳ 14: ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ರವರ 129ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ಏ.14) ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಭಕ್ತಿ ನಮನ ಸಲ್ಲಿಸಲಾಯಿತು.
ಕೋವಿಡ್-19 ವೈರಾಣು ತಡೆಗಟ್ಟಲು ಏ. 14ರವರೆಗೆ ಲಾಕ್ಡೌನ್ ಆದೇಶ ಇರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ರವರ ಜಯಂತಿಯನ್ನು ಕ್ಯಾಂಡಲ್ ಬೆಳಗಿಸಿ, ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಸರಳವಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಯಲಬುಗರ್ಾ ಶಾಸಕ ಹಾಲಪ್ಪ ಆಚಾರ್, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ ಮೂತರ್ಿ, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಲಕ್ಷ್ಮಣ ಬಬಲಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜು ಹಾಗೂ ಮತ್ತಿತರರು ಉಪಸ್ಥಿತರಿದ್ದು, ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು.