ಹೂವಿನಹಡಗಲಿ: ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ
Flower Boat: A festive Bakrid festival celebration
ಹೂವಿನಹಡಗಲಿ: ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ
ಹೂವಿನಹಡಗಲಿ07: ಬಕ್ರೀದ್ ಹಬ್ಬವನ್ನು ತಾಲೂಕಿನಾದ್ಯಂತ ಶನಿವಾರ ಮುಸ್ಲಿಮರು ಸಂಭ್ರಮ, ಸಡಗರದಿಂದ ಆಚರಿಸಿದರು.ಪಟ್ಟಣದ ಮಸೀದಿಯಲ್ಲಿ ಮುಂಜಾನೆಯ ಪ್ರಾರ್ಥನೆಯೊಂದಿಗೆ ಹಬ್ಬದ ಸಡಗರ ಕಳೆಗಟ್ಟಿತ್ತು. ಬೆಳಗ್ಗೆ 8.30ಕ್ಕೆ ಮಸೀದಿಯ ಮುಂಭಾಗ ಇಡೀ ಪಟ್ಟಣದ ಮುಸಲ್ಮಾನರು ಒಂದೆಡೆ ಸೇರಿ ದೇವರನಾಮಗಳನ್ನುಹಾಡಿದರು. ನಂತರ ಎಪಿಎಂಸಿ ಬಳಿ ಇರುವ ಈದ್ದಾ ಮೈದಾನದಲ್ಲಿ ಒಟ್ಟಾಗಿ ಸೇರಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮುಸ್ಲಿಂ ಧರ್ಮಗುರುಗಳು ಹಬ್ಬದ ಧಾರ್ಮಿಕ ವಿಧಿಗಳು, ಇದರ ಮಹತ್ವದ ಬಗ್ಗೆ ಪ್ರವಚನ ನೀಡಿದರು. ನಂತರ ದುವಾ (ಪ್ರಾರ್ಥನೆ) ಸಲ್ಲಿಸುವ ಮೂಲಕ ಈ ಪ್ರಕ್ರಿಯೆ ಪೂರ್ಣಗೊಂಡಿತು.ಬಣ್ಣಬಣ್ಣದ ಪೋಷಾಕುಗಳನ್ನು ಧರಿಸಿದ ಚಿಣ್ಣರು ಗಮನ ಸೆಳೆದರು. ಪರಸ್ಪರರು ಆಲಿಂಗಿಸಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ನಂತರ ಜಾನುವಾರುಗಳನ್ನು ಬಲಿಕೊಡುವ ಮೂಲಕ ಹಬ್ಬ ಸಂಪನ್ನಗೊಂಡಿತು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 