ಗದಗ : ಸಾರ್ವಜನಿಕರು ಸ್ವಚ್ಛತೆ, ಆರೋಗ್ಯ ಹಾಗೂ ಪರಿಸರದ ಕಾಳಜಿ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಿ ಎಂದು ಆರೋಗ್ಯ ಸಹಾಯಕ ಬಿ.ಬಿ.ನಿಡಗುಂದಿ ನುಡಿದರು.
ಗದಗ ಜೆಲ್ಲೆಯ ಮುಂಡರಗಿ ತಾಲೂಕಿನ ಬರದೂರು ಗ್ರಾಮದ ಅಗಸಿಕಟ್ಟಿ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಗದಗ ಹಾಗೂ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ಗ್ರಾಮ ಸಂಪರ್ಕ ಯೋಜನೆ ಅಡಿಯಲ್ಲಿ ಜಾನಪದ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಿದ್ಧಲಿಂಗೇಶ್ವರ ಜಾನಪದ ಕಲಾತಂಡ ಅಡವಿಸೋಮಾಪೂರ ಹಾಗೂ ಗುರು ಶಿಷ್ಯ ಪರಂಪರೆ ಜಾನಪದ ಕಲಾತಂಡ ಲಕ್ಕುಂಡಿ ಜಾನಪದ ಕಲಾ ತಂಡದವರು ಗ್ರಾಮದ ಸ್ವಚ್ಛತೆ ಹಾಗೂ ಸಕರ್ಾರದ ವಿವಿಧ ಜನಪರ ಯೋಜನೆಗಳಾದ ಕಿಸಾನ್ ಸಮ್ಮಾನ್, ಸಹಾಯಧನ, ನೇಕಾರರು, ಮೀನುಗಾರರ ಸಾಲಮನಾ, ರೈತರ ಸಾಲಮನ್ನಾ, ಸಮ್ಮಾನ್ ಯೋಜನೆಗಳ ಆಯುಷ ಸಮ್ಮಾನ್ ಕಾಡರ್್ ಯೋಜನೆಗಳ ಕುರಿತು ಆಯಾ ಇಲಾಖೆಯಲ್ಲಿ ಮಾಹಿತಿ ಪಡೆದು ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಜನಪದ ಗೀತೆ ಹಾಗೂ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಲಿಂಗಪ್ಪ ಗೋಡೆ, ಯಮನಪ್ಪ ಉಪ್ಪಾರ, ಈರಣ್ಣ, ದೇವಪ್ಪ ಗದಗ, ಚಿನ್ನಪ್ಪ ನಾಡಗೌಡ್ರ, ಆಶಾ ಕಾರ್ಯಕರ್ತೆ ಬಡಿಮಾ.ಆರ್. ಶೇಖ್, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.