ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ: ಡಾ. ಪುಟ್ಟರಾಜ್ ಭಜಂತ್ರಿ
Folk arts are the lifeblood of our culture: Dr. Puttaraj Bhajantri
ಲೋಕದರ್ಶನ ವರದಿ
ಬೆಳಗಾವಿ 25: ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಯಲ್ಲಾಪುರದ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪ್ರಸಿದ್ಧ ಕಲಾವಿದ ಡಾ. ಪುಟ್ಟರಾಜ್ ಬಸವಂತ ಭಜಂತ್ರಿ ಅವರು ಭಾಗವಹಿಸಿ ತಮ್ಮ ಜೀವನ ಪಯಣದ ಜೊತೆಗೆ ಜಾನಪದ ಕಲೆಗಳ ಮಹತ್ವದ ಕುರಿತು ಮನಮುಟ್ಟುವಂತೆ ಮಾತನಾಡಿದರು. ಸನಾದಿ ಅಪ್ಪಣ್ಣ ಅವರ ಐದನೇ ತಲೆಮಾರಿನ ವಾರಸುದಾರರಾಗಿರುವ ಅವರು, ನಮ್ಮ ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ. ಜನರು ಇವುಗಳನ್ನು ಪ್ರೋತ್ಸಾಹಿಸದಿದ್ದರೆ ಈ ಅಮೂಲ್ಯ ಪರಂಪರೆ ನಿಧಾನವಾಗಿ ಅಳಿದು ಹೋಗುವ ಅಪಾಯವಿದೆ ಎಂದು ಹೇಳಿದರು.
ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಹಾಗೂ ಶೆಹನಾಯಿ ವಾದಕರಾಗಿರುವ ಅವರು, ಜಾನಪದ ಮತ್ತು ಶಾಸ್ತ್ರೀಯ ಸಂಗೀತ ಎರಡನ್ನೂ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಶನವು ಶ್ರೋತೃಗಳಿಗೆ ಪ್ರೇರಣಾದಾಯಕವಾಗಿದ್ದು, ಸ್ಥಳೀಯ ಕಲೆಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿತು. ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿಯ ಸಂಸ್ಥಾಪಕ ಎಂ.ಎಸ್ ಚೌಗಲಾ, ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ರೇಡಿಯೋ ನಿರೂಪಕ ಆರ್ ಜೆ ಮೀರಾ, ಆರ್ ಜೆ ಚೇತನ್ ಹಾಗೂ ಸಂದರ್ಶಕ ಡಾ. ಶ್ರೀರಂಗ ಜೋಶಿ ಅವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 