ಜನಪದ ಸಾಹಿತ್ಯವೇ ವಚನ ಸಾಹಿತ್ಯಕ್ಕೆ ಪ್ರೇರಣೆ: ಎಂ.ಬಿ. ಕಟ್ಟಿಮನಿ
Folk literature is the inspiration for Vachana literature: M.B. Kattimani
ಶಿಗ್ಗಾವಿ, ಆ. 23: 12ನೇ ಶತಮಾನದ ವಚನ ಸಾಹಿತ್ಯಕ್ಕೆ ಜನಪದ ಸಾಹಿತ್ಯವೇ ಪ್ರೇರಣೆಯಾಗಿದ್ದು, ಹುಟ್ಟಿನಿಂದ ಸಾವಿನವರೆಗಿನ ಮಾನವ ಬದುಕಿನಲ್ಲಿ ಜನಪದದ ಹಾಸುಹೊಕ್ಕಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ಬೆಳಗಾವಿ ವಿಭಾಗೀಯ ಸಂಯೋಜಕ ಎಂ.ಬಿ. ಕಟ್ಟಿಮನಿ ಹೇಳಿದರು.
ಪಟ್ಟಣದ ಎಸ್ಬಿಬಿಎನ್ಡಿ ಪಪೂ ಮಹಾವಿದ್ಯಾಲಯದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ, ಶಿಗ್ಗಾವಿ ತಾಲ್ಲೂಕು ಘಟಕ ಹಾಗೂ ಎಸ್ಬಿಬಿಎನ್ಡಿ ಕಾಲೇಜಿನ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಜನಪದ ದಿನಾಚರಣೆ ವಿಶೇಷ ಉಪನ್ಯಾಸ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಜನಪದ ಸಾಹಿತ್ಯ ನಮ್ಮ ಮೂಲ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತವಾಗಿದೆ. ಮನುಷ್ಯನ ಬದುಕಿನೊಂದಿಗೆ ಹಾಸುಹೊಕ್ಕಾಗಿರುವ ಈ ಸಾಹಿತ್ಯವನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮೂಲ ಜನಪದ ಸಾಹಿತ್ಯವನ್ನು ಪಠ್ಯ ರೂಪದಲ್ಲಿ ಪರಿಚಯಿಸಬೇಕು.
ಅಕ್ಷರ ಬಾರದಿದ್ದ ಹಿರಿಯರು, ವಿಶೇಷವಾಗಿ ಮಹಿಳೆಯರು, ಹಾಡುಗಳ ಮೂಲಕ ನೈತಿಕ ಪಾಠಗಳನ್ನು ಕಲಿಸಿದ್ದಾರೆ. ಜನಪದ ವಿಶ್ವವಿದ್ಯಾಲಯವಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳು ನಿಜಕ್ಕೂ ಪುಣ್ಯವಂತರು ಎಂದು ಹೇಳಿದರು.
ದಲಿತ ಮಹಿಳೆಯರ ಕೊಡುಗೆ ಅಪಾರ
ಸಹಾಯಕ ಪ್ರಾಧ್ಯಾಪಕ ಡಾ. ಚಂದ್ರ್ಪ ಸೋಬಟಿ ಮಾತನಾಡಿ, ಜನಪದ ಸಾಹಿತ್ಯಕ್ಕೆ ದಲಿತ ಮಹಿಳೆಯರ ಕೊಡುಗೆ ಅಪಾರವಾಗಿದೆ. ನೋವು, ನಲಿವು ಹಾಗೂ ಶ್ರಮವನ್ನು ಮರೆಯಲು ಹಾಡು, ಕಥೆ, ಗಾದೆ ಮತ್ತು ಒಡಪುಗಳ ಮೂಲಕ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಕಟ್ಟಿಕೊಟ್ಟಿದ್ದಾರೆ. ಇಂತಹ ಮೌಲ್ಯಯುತ ಶಿಕ್ಷಣ ಇಂದಿನ ಯುವಪೀಳಿಗೆಗೆ ಅಗತ್ಯವಾಗಿದೆ ಎಂದು ಹೇಳಿದರು.
ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಶರೀಫ್ ಮಾಕಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸವನ್ನು ಪರಿಷತ್ತು ಮಾಡುತ್ತಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 