ಶಿಗ್ಗಾವಿ 13: ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಗ್ರಾಮದೇವಿ ಜಾತ್ರಾಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಪೆ 8 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾವೇರಿ ಇವರ ಪ್ರಾಯೋಜಿತ ಕಾರ್ಯಕ್ರಮದಲ್ಲಿ ತಾಲೂಕಿನ ಕ್ಯಾಲಕೊಂಡ ಗ್ರಾಮದ ಬಸವರಾಜ ಶಿಗ್ಗಾಂವ ಹಾಗೂ ಸಂಗಡಿಗರಿಂದ ಜಾನಪದ ಸಂಗೀತ ಕಾರ್ಯಕ್ರಮ ಜರುಗಿತು. ತಾಲೂಕಿನ ಜಾನಪದ ತಜ್ಞ ಹಾಗೂ ಅವ್ವ ಪ್ರಶಸ್ತಿ ಪುರಸ್ಕೃತ ಬಸವರಾಜ ಶಿಗ್ಗಾಂವ ನೇತೃತ್ವದಲ್ಲಿ ನಡೆದ ಜಾನಪದ ಸಂಗೀತ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಂಗೀತ ಅಭಿಮಾನಿಗಳು ಉಪಸ್ಥಿತರಿದ್ದರು.