ಕ್ವಾರಂಟೈನ್ ಹೊಸ ಮಾರ್ಗಸೂಚಿಯನ್ವಯನ್ನು ಪಾಲಿಸಿ

ವಿಜಯಪುರ ಮೇ.27 : ಜಿಲ್ಲೆಯಲ್ಲಿ ಮಹಾರಾಷ್ಟ್ರ, ಆಂಧ್ರ ಪ್ರದೇಶ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಾಮರ್ಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದ್ದು, ಸಕರ್ಾರದ ಹೊಸ ಮಾರ್ಗಸೂಚಿಯಂತೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್ ಪೂರೈಸುವ ಕಾಮರ್ಿಕರನ್ನು ನಂತರ ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್ ಮಾಡಿ ನಿಗಾ ಇಡುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

  ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಜಿಲ್ಲೆಗೆ ಆಗಮಿಸಿರುವ ಕಾಮರ್ಿಕರು 7 ದಿನ ಸಾಂಸ್ಥಿಕ ಕ್ವಾರಂಟೈನ್ ಪೂರ್ಣ ಮಾಡಿದ್ದಲ್ಲಿ ಅವರನ್ನು ಹೋಮ್ ಕ್ವಾರಂಟೈನ್ ಮಾಡಿ ಸಂಪೂರ್ಣ ನಿಗಾ ಇಡಬೇಕು ಎಂದು ಸೂಚಿಸಿದರು.

   ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಾಮರ್ಿಕರನ್ನು ಹೋಮ್ಕ್ವಾರಂಟೈನ್ ಮಾಡುವಾಗ ಪ್ರತಿಯೊಬ್ಬರು ಕ್ವಾರಂಟೈನ್ ವಾಚ್ ಆ್ಯಪ್ನ್ನು ಡೌನ್ಲೋಡ್ ಮಾಡುವಂತೆ ಸೂಚಿಸಬೇಕು. ಅಧಿಕಾರಿಗಳು ಕಾಮರ್ಿಕರನ್ನು ಹೋಮ್ ಕ್ವಾರಂಟೈನ್ ಮಾಡಿದ ನಂತರ ಅವರ ಒಂದು ಸೇಲ್ಫಿಯನ್ನು ಈ ಆ್ಯಪ್ನಲ್ಲಿ ಅಪ್ಲೋಡ್ ಮಾಡುವಂತೆ ಸೂಚಿಸಬೇಕು ಎಂದು ಹೇಳಿದರು.

  ಅದರಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸೇರಿದಂತೆ ವಿವಿಧ ವಸತಿ ನಿಲಯಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದ್ದು, ಗ್ರಾಮಮಟ್ಟದ ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು, ತಾಲೂಕಾ ಮಟ್ಟದ ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಹಶೀಲ್ದಾರಗಳು ಸೂಕ್ತ ನಿಗಾ ಇಡಬೇಕು. ಹೋಮ್ಕ್ವಾರಂಟೈನ್ ಮಾಡುವ ಮೊದಲು ಸೀಲ್ ಹಾಕಬೇಕು ಎಂದು ಸೂಚಿಸಿದರು.

   ಸಾಂಸ್ಥಿಕ ಕ್ವಾರಂಟೈನ್  ಮಾಡಲಾಗಿರುವ ಕಾಮರ್ಿಕರನ್ನು ಹೋಮ್ಕ್ವಾರಂಟೈನ್ ಮಾಡುವಾಗ ವಾಹನಗಳ ಅವಶ್ಯಕತೆ ಎದುರಾದರೆ ಅವರನ್ನು ಕರೆದೊಯ್ಯಲು ಸಕರ್ಾರಿ ವಾಹನಗಳನ್ನು ಬಳಸಿಕೊಳ್ಳಬಹುದಾಗಿದ್ದು, ಅವಶ್ಯಕತೆಗೆ ಅನುಗುಣವಾಗಿ ವಾಹನ ನೀಡಲಾಗುತ್ತದೆ. ಲಕ್ಷಣ ಹೊಂದಿದವರನ್ನು ಕ್ವಾರಂಟೈನ್ ಸಂದರ್ಭದಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುವುದು. ಒಂದು ವೇಳೆ ಪಾಸಿಟಿವ್ ಬಂದಲ್ಲಿ ಅಂತಹವರಿಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.

   ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಮಾತನಾಡಿ ಜಿಲ್ಲೆಯಾದ್ಯಂತ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ ವಲಸೆ ಕಾಮರ್ಿಕರು ಏಳು ದಿನ ಪೂರೈಸಿದವರ ಗಂಟಲು ದ್ರವ ಮಾದರಿಯನ್ನು ಪಡೆಯಲಾಗಿದ್ದು, ಐದು ದಿನದಲ್ಲಿಯೇ 21.000 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಗಮನಾರ್ಹ ಕಾರ್ಯವಾಗಿದೆ. 

 ಎಲ್ಲಾ ತಾಲೂಕಾ ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉತ್ತಮ ಕಾರ್ಯನಿರ್ವಹಿಸಿದ್ದಾರೆ ಎಂದರು. ಜಿಲ್ಲೆಗೆ ಆಗಮಿಸುವ ಕಾಮರ್ಿಕರನ್ನು ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ಏಳು ದಿನದ ನಂತರ ಸಂಪೂರ್ಣ ನಿಗಾ ವಹಿಸಿ ಹೋಮ್ಕ್ವಾರಂಟೈನ್ ಮಾಡಬೇಕು ಎಂದು ಹೇಳಿದರು.

  ಈ ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್, ಮಹಾನಗರ ಪಾಲಿಕೆ ಆಯುಕ್ತ ಹಷರ್ಾ ಶೆಟ್ಟಿ, ಡಾ.ಬಿರಾದಾರ, ಡಿಎಚ್ಒ ಮಹೇಂದ್ರ ಕಾಪ್ಸೆ, ಉಪ ವಿಭಾಗಾಧಿಕಾರಿ ಗೆಣ್ಣೂರ, ತಹಶೀಲ್ದಾರ ಮೋಹನ್ಕುಮಾರಿ ಸೇರಿದಂತೆ ಇತರರಿದ್ದರು.  

ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ವಿಜಯಪುರ ಮೇ. 28: ಮಹಾರಾಷ್ಟ್ರ ರಾಜ್ಯದಿಂದ ಜಿಲ್ಲೆಗೆ ಪ್ರವೇಶ ಮಾಡುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದ್ದು, ಆ ರಾಜ್ಯದ ಅಧಿಕೃತ ಪಾಸ್ ಇಲ್ಲದೆ ಜಿಲ್ಲೆಗೆ ಪ್ರವೇಶ ನೀಡಲಾಗುವುದಿಲ್ಲವೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಇಂದು ಉಮದಿ, ಶಿರಾಡೋಣ ಹಾಗೂ ಧೂಳಖೇಡ ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅನಧೀಕೃತವಾಗಿ ಚೆಕ್ಪೋಸ್ಟ್ದಿಂದ ಯಾರೂ ಹೊರ ರಾಜ್ಯದ ಪ್ರಯಾಣಿಕರು ಜಿಲ್ಲೆಗೆ ಪ್ರವೇಶ ಪಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಅವರು ಸೂಚನೆ ನೀಡಿದರು.

ಅದರಂತೆ ಜಿಲ್ಲೆಗೆ ಯಾರಾದರೂ ಮಹಾರಾಷ್ಟ್ರ ರಾಜ್ಯದಿಂದ ಪ್ರವೇಶ ಪಡೆಯುವ ಬಗ್ಗೆ ಗಮನಕ್ಕೆ ಬಂದಲ್ಲಿ ಆಯಾ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡುವಂತೆಯೂ ಕೂಡ ಅವರು ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದರು.

ಈಗಾಗಲೇ ಕೋವಿಡ್-19 ಅಪಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದ್ದು, ಅಧೀಕೃತ ಪಾಸ್ ಇಲ್ಲದೆ ಪ್ರವೇಶ ಪಡೆಯುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ನಿದರ್ಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅದರಂತೆ ಸ್ಥಳೀಯರು ಕೂಡ ತೀವ್ರ ನಿಗಾ ಇಟ್ಟು ಮಾಹಿತಿ ಒದಗಿಸಿ ಆಯಾ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಚೆಕ್ಪೋಸ್ಟ್ದಲ್ಲಿ ಮುನ್ನೆಚ್ಚರಿಕೆಯಾಗಿ ಪ್ರಯಾಣಿಕರ ತಪಾಸಣೆ ಮಾಡುತ್ತಿರುವ ಬಗ್ಗೆಯೂ ಪರಿಶೀಲನೆ ನಡೆಸಿದರು. ಸ್ಥಳೀಯ ಸಾರ್ವಜನಿಕರಲ್ಲಿ ಕೋವಿಡ್ -19 ಮುನ್ನೆಚ್ಚರಿಕೆಗಳ ಬಗ್ಗೆ ಅನಧಿಕೃತವಾಗಿ ಜಿಲ್ಲೆಗೆ ಪ್ರವೇಶ ಪಡೆಯುವ ಪ್ರಯಾಣಿಕರ ಬಗ್ಗೆಯೂ ಮಾಹಿತಿ ಒದಗಿಸುವ ಕುರಿತು ಪೊಲೀಸ್ ಇಲಾಖೆಯಿಂದ ಸೂಕ್ತ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

 ಜಿಲ್ಲಾಧಿಕಾರಿಗಳೊಂದಿಗೆ ಎಸ್ಪಿ ಅನುಪಮ್ ಅಗರವಾಲ್, ಜಿ.ಪಂ ಸಿಇಒ ಗೋವಿಂದ ರೆಡ್ಡಿ, ಚಡಚಣ ಸಿಪಿಐ ಶ್ರೀ ಚಿದಂಬರ, ಪಿಎಸ್ಐ ಬಾಗೇವಾಡಿ ಸೇರಿದಂತೆ ಇತರರು ಇದ್ದರು.