ಆಹಾರೋದ್ಯಮಿಗಳು ನೈರ್ಮಲ್ಯತೆ ಹಾಗೂ ಗುಣಮಟ್ಟದ ಬಗ್ಗೆ ಹೆಚ್ಚಿನ ನಿಗಾ ವಹಿಸಿ: ಡಾ. ಶಂಕರ್ ರಾವ್
Food entrepreneurs should pay more attention to hygiene and quality: Dr. Shankar Rao
ಲೋಕದರ್ಶನ ವರದಿ
ಕಾರವಾರ,ಮಾ.25 : ಆಹಾರೋದ್ಯಮಿಗಳು ತಮ್ಮ ಉದ್ಯಮದಲ್ಲಿ ನೈರ್ಮಲ್ಯತೆ ಹಾಗೂ ಗುಣಮಟ್ಟದ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿ ಡಾ.ಶಂಕರ ರಾವ್ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಭವನದಲ್ಲಿ, ಆಹಾರ ಸುರಕ್ಷತೆ ಮತ್ತು ಓಷಧಿ ಆಡಳಿತ ಹಾಗೂ ಆಹಾರ ಸುರಕ್ಷತಾ ತರಬೇತಿ ಪ್ರಮಾಣ ಪತ್ರ ಕೇಂದ್ರ ವತಿಯಿಂದ ಆಯೋಜಿಸಲಾದ ಆಹಾರ ಸುರಕ್ಷತಾ ತರಬೇತಿ ಪ್ರಮಾಣಪತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಆಹಾರ ಸುರಕ್ಷತಾ ಅಧಿಕಾರಿ ರಾಜ್‌ರೆಡ್ಡಿ ಮಾತನಾಡಿ, ಈ ತರಬೇತಿಯಲ್ಲಿ ಪಾಲ್ಗೋಂಡ ಎಲ್ಲ ಆಹಾರ ವಹಿವಾಟುದಾರರು ಹೆಚ್ಚಿನ ನೈರ್ಮಲ್ಯ, ಶುಚ್ಚಿತ್ವ ಹಾಗೂ ಗುಣಮಟ್ಟತೆಯನ್ನು ಅಳವಡಿಸಿಕೊಳ್ಳಬೇಕು ಎಂದರು.
ತರಬೇತಿ ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೇ ಇಲ್ಲಿ ತರಬೇತಿದಾರರಿಂದ ಪಡೆದುಕೊಳ್ಳುವ ತರಬೇತಿಯಿಂದ ನಿಮ್ಮ ಮುಂದಿನ ವ್ಯವಹಾರಗಳಲ್ಲಿ ಶುಚ್ಚಿತ್ವ ಗುಣಮಟ್ಟತೆಯನ್ನು ಅಳವಡಿಸಿಕೊಳ್ಳುವಂತೆ ನಿವೃತ್ತ ಆಹಾರ ಸುರಕ್ಷತಾ ಅಧಿಕಾರಿ ಹಾಗೂ ಸಲಹೆಗಾರ ಅರುಣ ಕಾಸಿಭಟ್ಟ ತಿಳಿಸಿದರು.
ಉತ್ತರ ಕನ್ನಡ ಜಿಲ್ಲಾ ಸಂಯೋಜಕ ಮನೋಜ ನಾಯಕ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಈ ತರಬೇತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಕಡ್ಡಾಯವಾಗಿ ಈಓಖಖಿಂಅ. ತರಬೇತಿ ಪ್ರಮಾಣಪತ್ರದ ಪ್ರಯೋಜನವನ್ನು ಎಲ್ಲಾ ಆಹಾರ ವಹಿವಾಟುದಾರರು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಆಹಾರ ಸುರಕ್ಷತಾ ತರಬೇತಿ ಪ್ರಮಾಣ ಪತ್ರ ಕೇಂದ್ರದ ರಾಜ್ಯ ಮೇಲ್ವಿಚಾರಕ ಪಂಡಿತ ರಾಜ್, ತರಬೇತಿದಾರ ಯಶವಂತ ಅರುಣ, ಆಹಾರ ಸುರಕ್ಷತಾ ಪ್ರಮಾಣ ಪತ್ರ ಕೇಂದ್ರ, ಭಾರತ ಸರಕಾರ ಇವರು ಎಲ್ಲಾ ವಹಿವಾಟುದಾರರಿಗೆ ವಹಿವಾಟುಗಳ ನಿರ್ವಹಣೆ, ಸುರಕ್ಷತಾ ಕ್ರಮ ಶುಚಿತ್ವ, ಕಲಬೆರಕೆ, ಅನಾವಶ್ಯಕ ಖರ್ಚು ನಿಯಂತ್ರಣ ಮತ್ತು ಕಡ್ಡಾಯ ಪ್ರಮಾಣ ಪತ್ರದ ಮಹತ್ವದ ಕುರಿತು ಮಾಹಿತಿ ಹಾಗೂ ಈಓಖಖಿಂಅ ತರಬೇತಿ ನೀಡಲಾಯಿತು.
ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಿದ ಕಾರವಾರ ತಾಲೂಕಾ ಸಂಯೋಜಕರಾದ ದೀಪಕ ನಾಯ್ಕ ಹಾಗೂ ದಿಯಾ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 