ಕಾಲುಬಾಯಿ ರೋಗ ಲಸಿಕಾ ಅಭಿಯಾನ ಪೋಸ್ಟರ್ ಬಿಡುಗಡೆ

Foot-and-mouth disease vaccination campaign poster released

ಕಾಲುಬಾಯಿ ರೋಗ ಲಸಿಕಾ ಅಭಿಯಾನ ಪೋಸ್ಟರ್ ಬಿಡುಗಡೆ

ಕೊಪ್ಪಳ 19: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿ 7ನೇ ಸುತ್ತಿನ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಕ್ವೆಸಾನ್ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 19 ರಂದು ನಡೆಯಿತು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿ ಜಿಲ್ಲೆಯಲ್ಲಿರುವ ಜಾನುವಾರುಗಳಿಗೆ ಕಾಲುಬಾಯಿ ರೋಗದ ವಿರುದ್ಧ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಲು ಏಪ್ರಿಲ್ 21 ರಿಂದ ಜೂನ್ 04 ರವರೆಗೆ ಲಸಿಕಾ ಅಭಿಯಾನವನ್ನು ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ರೋಗ ಲಸಿಕಾ ಅಭಿಯಾನದ ಪೋಸ್ಟರ್‌ಗಳನ್ನು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು, ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗದಿಂದ ರಾಜ್ಯವನ್ನು ಮುಕ್ತ ಮಾಡಲು ಸಾರ್ವಜನಿಕರು ಸಹಕರಿಸಬೇಕು. ಅದೇ ರೀತಿ ಜಿಲ್ಲೆಯಲ್ಲಿ ಈ ಅಭಿಯಾನವನ್ನು ಸಮರ​‍್ಕವಾಗಿ ಹಮ್ಮಿಕೊಂಡು, ಜಿಲ್ಲೆಯ ಎತ್ತು, ಹೋರಿ, ಹಸು, ಎಮ್ಮೆ ಮತ್ತು ಸಂಬಂಧಿಸಿದ ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈ ಲಸಿಕಾ ಅಭಿಯಾನದ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಪಶು ಇಲಾಖೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರುಶುರಾಮ್ ವೈ ಶೆಟ್ಟಪ್ಪನವರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಪಿ.ಎಂ ಮಲ್ಲಯ್ಯ, ಯಲಬುರ್ಗಾ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಪ್ರಕಾಶ, ಕೊಪ್ಪಳ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ವಿನೋದ ಕುಮಾರ್, ಕುಕನೂರ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಸುರೇಶ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಪಶು ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.