ಫುಟ್ಬಾಲ್: ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ
Football: Karnataka crowned champions
ಲೋಕದರ್ಶನ ವರದಿ
ಧಾರವಾಡ 19: ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಸೃಜನ್ ಆರ್. ಶಿರ್ಕೋಲ್ ಮೃತ್ಯುಂಜಯ ನಗರದ 12ರಿಂದ 15 ಜೂನ್ 2026ರವರೆಗೆ ಗೋವಾ ಫುಟ್ಬಾಲ್ ಅಸೊಸಿಯೇಶನ್ ಸ್ಟೇಡಿಯಂನಲ್ಲಿ ನಡೆದ 26ನೇ ರಾಷ್ಟ್ರೀಯ 7-ಎ-ಸೈಡ್ ಫುಟ್ಬಾಲ್ ಚಾಂಪಿಯನ್ಶಿಪ್ (ಫೆಡರೇಶನ್ ಕಪ್) 2026 ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾನೆ. ಕರ್ನಾಟಕ ತಂಡವು ಈ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಸಾಧನೆಗೈದ ವಿದ್ಯಾರ್ಥಿಯನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಮಹಾವೀರ ಉಪಾದ್ಯೆ, ಶಾಲೆಯ ಪ್ರಾಚಾರ್ಯೆ ತ್ರಿವೇಣಿ. ಆರ್, ಸಂಸ್ಥೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 