ನೂರು ದಿನಗಳತ್ತ ಎಚ್ಡಿಕೆ ಸಕರ್ಾರದ ದಾಪುಗಾಲು

ಬೆಂಗಳೂರು 28: ರೈತರ ಸಾಲ ಮನ್ನಾ, ಲೇವಾದೇವಿದಾರರ ಕಿರುಕುಳದಿಂದ ಬಡವರಿಗೆ ಮುಕ್ತಿ ನೀಡುವ ಸುಗ್ರೀವಾಜ್ಞೆ ಜಾರಿ, ಹಸಿರು ಕನರ್ಾಟಕ ಯೋಜನೆ, ವಿದ್ಯಾಥರ್ಿಗಳಿಗೆ ಉಚಿತ ಪ್ರವಾಸ ಭಾಗ್ಯ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸಕರ್ಾರ ನೂರು ದಿನಗಳತ್ತ ದಾಪುಗಾಲಿಟ್ಟಿದೆ.

ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸಕರ್ಾರ  ಆ.30ರಂದು ಶತದಿನ ಪೂರೈಸಲಿದೆ. ಯಾರೂ ಊಹಿಸಲಾರದ ರೀತಿಯಲ್ಲಿ ರಚನೆಯಾದ ಸಮ್ಮಿಶ್ರ ಸಕರ್ಾರ ರಾಜಕೀಯ  ಏಳು-ಬೀಳುಗಳ ನಡುವೆ ಜನಪರ ಯೋಜನೆಗಳೊಂದಿಗೆ ಮುನ್ನುಗ್ಗುತ್ತಿದೆ. 

ಪ್ರಬಲ ವಿರೋಧ ಪಕ್ಷವಾದ ಬಿಜೆಪಿಯವರ ಟೀಕಾಪ್ರಹಾರ,  ಆಡಳಿತಾರೂಢ ಕಾಂಗ್ರೆಸ್, ಜೆಡಿಎಸ್ ಪಕ್ಷದ ಹಲವು ನಾಯಕರ ಅಸಮಾಧಾನದ ನಡುವೆಯೂ ಕುಮಾರಸ್ವಾಮಿ ಸಮ್ಮಿಶ್ರ ಸಕರ್ಾರದ ರಥವನ್ನು ಮುನ್ನಡೆಸುತ್ತಿದ್ದಾರೆ.

ಎರಡೂ ಪಕ್ಷಗಳ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಪಕ್ಷಗಳನ್ನವರನ್ನು ಸಮರ್ಥವಾಗಿ ಎದುರಿಸಿ ಆಡಳಿತ ನಡೆಸುವುದು ಅಷ್ಟೇನು ಸುಲಭವಲ್ಲ. ಸಮ್ಮಿಶ್ರ ಸಕರ್ಾರ ನಡೆಸುವುದೇ ಒಂದು ಸವಾಲಾಗಿದೆ. ತಂತಿಯ ಮೇಲಿನ ನಡಿಗೆಯಂತಾಗಿದೆ. ಇದರ ಅರಿವು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗಿದ್ದು, ಅವರು ಪ್ರತಿ ಹೆಜ್ಜೆಗಳನ್ನು ಎಚ್ಚರಿಕೆಯಿಂದ ಇಡುತ್ತಲೇ ಬಂದಿರುವುದರಿಂದ ಸಕರ್ಾರ ಯಶಸ್ವಿಯತ್ತ ಸಾಗುತ್ತಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವುದೆ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಕರ್ಾರ ಮೇ 23ರಂದು ರಚನೆಯಾಯಿತು. ಅಂದು ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದರು.

ರಾಷ್ಟ್ರೀಯ ನಾಯಕರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ, ಶರದ್ಪವಾರ್, ಮಾಯಾವತಿ, ಮಮತಾ ಬ್ಯಾನಜರ್ಿ ಚಂದ್ರಬಾಬುನಾಯ್ಡು, ಎಚ್.ಡಿ.ದೇವೇಗೌಡರು ಸೇರಿದಂತೆ ಹಲವು ನಾಯಕರ ದಂಡೇ ನೆರೆದಿತ್ತು.

ಕಳೆದ ನೂರು ದಿನಗಳಲ್ಲಿ ಸಮ್ಮಿಶ್ರ ಸಕರ್ಾರ ರೈತರ ಸಾಲ ಮನ್ನಾ ಮಾಡುವ ಮಹತ್ವದ ಹಾಗೂ ಐತಿಹಾಸಿಕ ತೀಮರ್ಾನವನ್ನು ಕೈಗೊಂಡು ಕಾರ್ಯಗತಗೊಳಿಸುವ ಯತ್ನದಲ್ಲಿದೆ.

ಸಾಲಗಾರರ ಸುಳಿಯಿಂದ ರೈತರು ಹಾಗೂ ಕೃಷಿ ಕಾಮರ್ಿಕರನ್ನು ಮುಕ್ತಗೊಳಿಸಲು ಋಣ ಪರಿಹಾರ ಅಧಿನಿಯಮವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಹಸಿರು ಕನರ್ಾಟಕ ಯೋಜನೆಗೆ ಚಾಲನೆ ನೀಡಲಾಗಿದೆ.

ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಲು ಮಂಡ್ಯ ಜಿಲ್ಲೆಯಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಗದ್ದೆಗಿಳಿದು ಭತ್ತದ ನಾಟಿ ಮಾಡುವ ಮೂಲಕ ಧೈರ್ಯ ತುಂಬುವ ಕೆಲಸ ಮಾಡಿದರು.

ರಾಜ್ಯ ಸಕರ್ಾರ ರೈತರ ಪರವಾಗಿದ್ದು, ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ರೈತರನ್ನು ಆಥರ್ಿಕವಾಗಿ ಸದೃಢಗೊಳಿಸುವ ಯೋಜನೆಗಳನ್ನು ಕಾರ್ಯಗತಗೊಳಿಸಲಿದೆ ಎಂಬ ಭರವಸೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಿರಂತರವಾಗಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳಿಗೆ ಮುಖ್ಯಮಂತ್ರಿ ಸ್ಪಂದಿಸುತ್ತಾ ಬಂದಿದ್ದಾರೆ. ಈ ನಡುವೆ ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿವೃಷ್ಟಿ ಉಂಟಾಗಿ ಸಂಕಷ್ಟಕ್ಕೀಡಾದ ಜನರ ನೆರವಿಗೆ ಸಕರ್ಾರ ತುತರ್ಾಗಿ ಸ್ಪಂದಿಸುವ ಕೆಲಸವನ್ನು ಮಾಡುತ್ತಿದೆ.

ಕೊಡಗು ಸೇರಿದಂತೆ ಮಳೆ ಅನಾಹುತಕ್ಕೀಡಾದ ಪ್ರದೇಶಗಳಲ್ಲಿ ಪುನರ್ವಸತಿ ಕಲ್ಪಿಸಲು ರಾಜ್ಯ ಸಕರ್ಾರ ಮುಂದಾಗಿದೆ. ಸಂಪುಟ ವಿಸ್ತರಣೆ, ನಿಗಮ ಮಂಡಳಿಗೆ ನೇಮಕ ಮಾಡುವಂತೆ ಪದೇ ಪದೇ ಒತ್ತಡ ಕೇಳಿಬರುತ್ತಿದೆ. ಸಕರ್ಾರಿ ನೌಕರರ ಅಧಿಕಾರಿಗಳ ವಗರ್ಾವಣೆ, ಉತ್ತರ ಕನರ್ಾಟಕ ಹಾಗೂ ಕರಾವಳಿ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪ-ಪ್ರತ್ಯಾರೋಪಗಳ ನಡುವೆಯೇ ಸಮ್ಮಿಶ್ರ ಸಕರ್ಾರ ಶತ ದಿನ ಪೂರೈಸುವತ್ತ ಹೆಜ್ಜೆ ಹಾಕಿದೆ.

ಕಳೆದ 2-3 ವರ್ಷಗಳಿಂದ ಬರದ ಛಾಯೆಗೆ ಸಿಲುಕಿದ್ದ ರಾಜ್ಯ ಈ ವರ್ಷವೂ ಭಾಗಶಃ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಆದರೆ, ರಾಜ್ಯದ ಪ್ರಮುಖ ಜಲಾಶಯಗಳು ಭತರ್ಿಯಾಗಿ ನಿಟ್ಟುಸಿರು ಬಿಡುವಂತಾಗಿದೆ.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ಎರಡನ್ನೂ ಅನುಷ್ಠಾನಗೊಳಿಸುವ ಹೊಣೆಗಾರಿಕೆ ರಾಜ್ಯ ಸಕರ್ಾರದ ಮೇಲಿದೆ. 

ಒಟ್ಟಾರೆ ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸಕರ್ಾರ ಸಾಗುತ್ತಿದ್ದು, ರೈತರು ಹಾಗೂ ಜನ ಪರವಾಗಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಉದ್ದೇಶವನ್ನು ಹೊಂದಿದೆ.