ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಜೆ.ಎನ್ ಗಣೇಶಗೆ ಸಚಿವ ಸ್ಥಾನ ನೀಡಲೇಬೇಕು : ಎಲ್ ಹೊನ್ನೂರವಲಿ ಒತ್ತಾಯ
For the development of the state, MLA J.N. Ganesh should be given a ministerial position: L. Honnura
ಲೋಕದರ್ಶನ ವರದಿ
ಕಂಪ್ಲಿ 26: ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳೊಂದಿಗೆ ಅಚ್ಚುಮೆಚ್ಷಿನ ನಾಯಕರಾಗಿರುವ ಶಾಸಕ ಜೆ.ಎನ್.ಗಣೇಶಗೆ ಇಡೀ ರಾಜ್ಯದ ಅಭಿವೃದ್ಧಿ ದೃಷ್ಠಿಯಿಂದ ಸಚಿವ ಸ್ಥಾನ ನೀಡಲೇಬೇಕು ಎಂದು ಪುರಸಭೆ ಮಾಜಿ ಸದಸ್ಯ ಲೊಡ್ಡು ಹೊನ್ನೂವರಲಿ ಒತ್ತಾಯಿಸಿದರು. ಪಟ್ಟಣದ ಗಂಗಾವತಿ ರಸ್ತೆಯ ಹಜರತ್ ಬಡೇಸಾಹೇಬ್ ದರ್ಗಾದಲ್ಲಿ ಕಂಪ್ಲಿ-ಕೋಟೆ ಯುವ ನಾಯಕ ಇಮ್ರಾನ್ ಬಳಗದ ಸಹಕಾರದೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಶಾಸಕ ಜೆ.ಎನ್.ಗಣೇಶ ಅವರ ಹೆಸರಿನಲ್ಲಿ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿ, ನಂತರ ಭಕ್ತರಿಗೆ ಅನ್ನಸಂತಾರೆ್ಣ ವಿತರಿಸಿ ಮಾತನಾಡಿ, ರೈತ, ಕಾರ್ಮಿಕರ ಸೇರಿದಂತೆ ಕ್ಷೇತ್ರದ ಜನರ ಸೇವೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ರಸ್ತೆ, ಕುಡಿಯುವ ನೀರು, ಬೀದಿ ದೀಪ ಸೇರಿ ನಾನಾ ಅಭಿವೃದ್ಧಿ ಕಾರ್ಯಗಳನ್ನು ಸಾಕಷ್ಟು ಅನುದಾನದಲ್ಲಿ ಕೆಲಸ ಮಾಡಿದ್ದಾರೆ. ನಿರಂತರವಾಗಿ ಜನರ ಮಧ್ಯದಲ್ಲಿದ್ದು, ಜನರಿಗೋಸ್ಕರ ಸೇವೆ ಮಾಡುವ ಏಕೈಕ ನಾಯಕ ಶಾಸಕ ಜೆ.ಎನ್.ಗಣೇಶರಾಗಿದ್ದಾರೆ. ಆದ್ದರಿಂದ ಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ವರಿಷ್ಟರು, ಹೈಕಮಾಂಡ್ ಹೆಚ್ಚಿನ ಮುತುವರ್ಜಿಯಿಂದ ಗಣೇಶಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಬರುವ ದಿನದಲ್ಲಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದರು.
ಯುವ ನಾಯಕ ಇಮ್ರಾನ್ ಮಾತನಾಡಿ, ಜನ ಸೇವೆಯೇ ಜನಾರ್ದನ ಸೇವೆ ಎಂಬಂತೆ ಪ್ರತಿ ಹಂತದಲ್ಲಿ ಜನಪರ ಸೇವೆ ಸಲ್ಲಿಸುವ ಮೂಲಕ ಶಾಸಕ ಗಣೇಶ ಜನಮೆಚ್ಚಿನ ನಾಯಕರಾಗಿದ್ದಾರೆ. ಇಂತಹ ನಾಯಕ ಗಣೇಶಗೆ ಸಚಿವ ಸ್ಥಾನ ನೀಡಲೇಬೇಕು ಎಂದರು. ನಂತರ ಪುರಸಭೆ ಮಾಜಿ ಅಧ್ಯಕ್ಷ ಭಟ್ಟ ಪ್ರಸಾದ್ ಅವರ ಜನ್ಮದಿನವನ್ನು ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ವಿಜೃಂಭಣೆಯಿಂದ ಆಚರಿಸಿದರು. ಈ ಸಂದರ್ಭದಲ್ಲಿ ಆಪ್ತ ಸಹಾಯಕ ಧನ್‌ರಾಜ್, ಮುಖಂಡರಾದ ಅಕ್ಕಿ ಜಿಲಾನ್, ಮೈನು, ಬೆಳಗೋಡ್ ಜಾವೀದ್, ಬಿ.ಬಾಸಾ ಬಿ.ಹಸನ್, ಬಾಲಕೃಷ್ಣ ಆದಿಶೇಷಯ್ಯ ಶ್ರೀಧರ್ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 