ಅಧಿಕಾರಿಗಳಿಗೆ ತರಬೇತಿ ನೀಡಲು ಒತ್ತಾಯ

ಲೋಕದರ್ಶನ ವರದಿ

ಬೆಳಗಾವಿ : ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆ ಮತ್ತು ಕಾಯ್ದೆಯ ಕುರಿತು 42 ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಾಧಿಕಾರಿಗಳಿಗೆ ತರಬೇತಿ ನೀಡಬೇಕೆಂದು ಒತ್ತಾಯಿಸಿ ಶುಕ್ರವಾರ ಎಸ್ಸಿಎಸ್ಪಿ, ಟಿಎಸ್ಪಿ ಜನಜಾಗೃತಿ ವೇದಿಕೆಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಶುಕ್ರವಾರ ದಿನದಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ವೇಧಿಕೆ ಪದಾಧಿಕಾರಿಗಳು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ಸಲ್ಲಿಸಿ, ರಾಜ್ಯದಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಕಾಯ್ದೆಯು 2013-14ರಲ್ಲಿಯೇ ಜಾರಿಗೆ ಬಂದಿದ್ದು, ಈ ಕಾಯ್ದೆ ಜಾರಿಗೆ ಬಂದು 5 ವರ್ಷಗಳು ಕಳೆದರೂ ಕಾಯ್ದೆಯ ಕುರಿತು ಅಧಿಕಾರಿಗಳಲ್ಲಿ ಸೂಕ್ತ ಮಾಹಿತಿ ಇಲ್ಲ. ಹೀಗಾಗಿ ಯೋಜನೆಯಡಿ ಸಿಗುವ ಸೌಲಭ್ಯಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳಿಗೆ ಯೋಜನೆಯ ಬಗ್ಗೆ ತರಬೇತಿ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಮಹೇಶ ಕೋಲಕಾರ, ಸುನೀಲ ಬಸ್ತವಾಡಕರ, ಸುನೀಲ ಕೋಲಕಾರ, ಶೋಭಾ ಕಿಣಗಿ, ವೈಶಾಲಿ ಕಮ್ಮಾರ, ಲಕ್ಷ್ಮೀ ಗೊರವ, ವಿಠ್ಠಲ ತಳವಾರ, ಲಕ್ಷ್ಮಣ ಗೊರವ, ಮಹಾನಂದ ತಳವಾರ, ಪರಶುರಾಮ ಕೋಲಕಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.