ಲೋಕದರ್ಶನ ವರದಿ
ಯರಗಟ್ಟಿ: ಅರಣ್ಯ ಸಂರಕ್ಷಣೆ ಮತ್ತು ಅತೀ ಹೆಚ್ಚು ಗಿಡಗಳನ್ನು ನೆಟ್ಟು ಸಂರಕ್ಷಿಸಿದ ಕಾರ್ಯ ಪರಿಗಣಿಸಿ ಸಾಮಾಜಿಕ ಅರಣ್ಯದ ಉಪ ವಲಯ ಅರಣ್ಯಾಧಿಕಾರಿ ಸೇವೆ ಸಲ್ಲಿಸುತ್ತಿರುವ ಸೋಮಶೇಖರ ಬಿ. ಪಾವಟೆ ಅವರಿಗೆ ಬಿ.ಮಾರಪ್ಪ ಸ್ಮಾರಕ ಟ್ರಸ್ಟ್ ಮತ್ತು ಕನರ್ಾಟಕ ಅರಣ್ಯ ಇಲಾಖೆ ವತಿಯಿಂದ ಕೊಡಮಾಡುವ 2019-20ನೇ ಸಾಲಿನ ಅತ್ಯುತ್ತಮ ಪ್ರಶಸ್ತಿಯನ್ನು ನೀಡಲಾಯಿತು. ಇತ್ತಿಚೇಗೆ ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಗಣಿ ಭೂವಿಜ್ಞಾನ ಹಾಗೂ ಅರಣ್ಯ ಸಚಿವ ಸಿ.ಸಿ ಪಾಟೀಲ ಹಾಗೂ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು