ಅರಣ್ಯ ಸಂರಕ್ಷಣೆ ಎಲ್ಲರ ಹೊಣೆ: ಹುತಾತ್ಮ ಅರಣ್ಯ ಸಿಬ್ಬಂದಿಯ ತ್ಯಾಗ ಸ್ಮರಿಸಿದ ಗಣ್ಯರು

ಅರಣ್ಯ ಸಂರಕ್ಷಣೆ ಎಲ್ಲರ ಹೊಣೆ: ಹುತಾತ್ಮ ಅರಣ್ಯ ಸಿಬ್ಬಂದಿಯ ತ್ಯಾಗ ಸ್ಮರಿಸಿದ ಗಣ್ಯರು  Forest conservation is everyone's responsibility: Dignitaries honor the sacrifice of martyred forest

ಲೋಕದರ್ಶನ ವರದಿ  

ಅರಣ್ಯ ಸಂರಕ್ಷಣೆ ಎಲ್ಲರ ಹೊಣೆ: ಹುತಾತ್ಮ ಅರಣ್ಯ ಸಿಬ್ಬಂದಿಯ ತ್ಯಾಗ ಸ್ಮರಿಸಿದ ಗಣ್ಯರು  

ಹಾವೇರಿ, ಸೆ. 11: ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮ ಸಿಬ್ಬಂದಿಗೆ ಕೇವಲ ಶ್ರದ್ಧಾಂಜಲಿ ಸಲ್ಲಿಸಿದರೆ ಸಾಲದು. ಅವರ ಸ್ಮರಣಾರ್ಥ ಜಿಲ್ಲೆಯಾದ್ಯಂತ ಅರಣ್ಯ ಇಲಾಖೆಗೆ ಸೇರಿದ ಖಾಲಿ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಹೊಸ ಅರಣ್ಯ ನಿರ್ಮಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್‌.ವಿ. ಹೇಳಿದರು.  

ಹಾವೇರಿ ಪಟ್ಟಣದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ನಮನ ಸಲ್ಲಿಸಿ ಅವರು ಮಾತನಾಡಿದರು.  

ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರಸ್ತುತ ್ಕ್ಣ್ಝೂಹ್ಝಿ್ಲ್ಖೂಹ್ಥ್ಝ್ತ ಸಂಘರ್ಷ, ಅರಣ್ಯ ನಾಶ ಸೇರಿದಂತೆ ಹಲವು ಪರಿಸರ ಸಂಬಂಧಿತ ಸಮಸ್ಯೆಗಳು ಎದುರಾಗುತ್ತಿವೆ. ಇಂತಹ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಅರಣ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದರು.  

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬ ನಾಗರಿಕನೂ ತನ್ನದೇ ಆದ ಹೊಣೆಗಾರಿಕೆಯನ್ನು ನಿರ್ವಹಿಸಬೇಕು. ಅರಣ್ಯ ಪ್ರದೇಶಗಳ ರಕ್ಷಣೆ, ಗಿಡಮರಗಳ ಬೆಳೆಸುವಿಕೆ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.  

ಪ್ರಕೃತಿ ಸಂಪತ್ತಿನ ಸಂರಕ್ಷಣೆಯ ಮೂಲಕ ಪರಿಸರ ಸಮತೋಲನ ಕಾಪಾಡುವುದರ ಜೊತೆಗೆ ಅರಣ್ಯ ರಕ್ಷಣೆಯ ಸಂದರ್ಭದಲ್ಲಿ ಹುತಾತ್ಮರಾದ ಸಿಬ್ಬಂದಿಯ ತ್ಯಾಗವನ್ನು ಸದಾ ಸ್ಮರಿಸಬೇಕು. ಅವರ ಸ್ಮರಣಾರ್ಥ ಜಿಲ್ಲೆಯ ವಿವಿಧೆಡೆ ಗಿಡ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವುಗಳ ಪೋಷಣೆ ಹಾಗೂ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಈ ಮೂಲಕ ಅರಣ್ಯ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದವರ ತ್ಯಾಗಕ್ಕೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಕೆ.ಹೆಚ್‌., ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಸ್‌. ಹೆಬ್ಬಾಳ್, ವಲಯ ಸಂರಕ್ಷಣಾಧಿಕಾರಿ ಸಿದ್ದಮ್ಮ ಕರಿಗಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.