ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಮೀನಾಕ್ಷಿ ಬಣ್ಣದಭಾವಿ
Forest conservation is everyone's responsibility: Meenakshi Bannadabhavi
ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಮೀನಾಕ್ಷಿ ಬಣ್ಣದಭಾವಿ
ಕೊಪ್ಪಳ 13: ಅರಣ್ಯಗಳು ಮಳೆನೀರಿನ ಸಂರಕ್ಷಣೆ, ಮಣ್ಣಿನ ರಕ್ಷಣೆ, ಜೀವ ವೈವಿಧ್ಯ ಹಾಗೂ ಹವಾಮಾನ ಸಮತೋಲನಕ್ಕೆ ಅತ್ಯಂತ ಅಗತ್ಯವಾಗಿವೆ. ಪರಿಸರ ಸಂರಕ್ಷಣೆಗಾಗಿ ಅರಣ್ಯಗಳನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದಭಾವಿ ಹೇಳಿದರು. ತಾಲೂಕಿನ ಕಾತ್ರಳ್ಳಿ ಗ್ರಾಮದ ಕ್ಲಬ್ ದತ್ತು ಪಡೆದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರಣ್ಯ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸೇವೆ ಮತ್ತು ಬಲಿದಾನವನ್ನು ಸ್ಮರಿಸಿ ಅವರಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮೀನಾಕ್ಷಿ ಬಣ್ಣದಭಾವಿ, ಅರಣ್ಯ ಸಂರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರ ಬಲಿದಾನವನ್ನು ಸ್ಮರಿಸುವ ಉದ್ದೇಶದಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಅರಣ್ಯಗಳನ್ನು ಉಳಿಸುವುದರ ಜೊತೆಗೆ ಪರಿಸರವನ್ನೂ ಸಂರಕ್ಷಿಸುವ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು. ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ವತಿಯಿಂದ ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಕ್ಲಬ್ ಖಜಾಂಚಿ ಶಿಲ್ಪಾ ರಾಜು ಶಶಿಮಠ ಅವರು ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ, ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಕ್ಲಬ್ ಕಾರ್ಯದರ್ಶಿ ಶ್ರೀದೇವಿ ಪಾಟೀಲ್, ಐಎಸ್ಒ ಲತಾ ಪಟ್ಟಣಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಶಾರದಾ ದಾದ್ಮಿ, ಹಿರಿಯರಾದ ಡಾ. ರಾಧಾ ಕುಲಕರ್ಣಿ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 