ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ

ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು  : ನ್ಯಾ. ಗಂಗಾಧರ ಎಂ.ಸಿ Forest conservators are the pioneers of the country's greenery: Justice Gangadhar M.C.

ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು  : ನ್ಯಾ. ಗಂಗಾಧರ ಎಂ.ಸಿ 

ಗದಗ  11: ನಾಡಿನ ಹಸಿರಿನ ನಿಜವಾದ ಹರಿಕಾರರು ಅರಣ್ಯ ಸಂರಕ್ಷಕರು ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾದರ ಎಂ.ಸಿ ಅವರು ಹೇಳಿದರು. 

ಗದಗ ತಾಲೂಕಿನ ಬಿಂಕದಕಟ್ಟಿಯಲ್ಲಿ ಗುರುವಾರ ಅರಣ್ಯ ಇಲಾಖೆಯಿಂದ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಜರುಗಿದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.  ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಕರ್ನಾಟಕ ಅರಣ್ಯ ಇಲಾಖೆ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ ಅವರ ತ್ಯಾಗ ಬಲಿದಾನ ನಾವೆಲ್ಲರೂ ನೆನೆಯುವ ಮೂಲಕ ಅರಣ್ಯ ಸಂರಕ್ಷಣೆಗೆ ಶ್ರಮಿಸಿದ ಸರ್ವರಿಗೂ ಆಭಾರಿಗಳಾಗಿರೋಣ ಎಂದರು. ಇಂದು ಹುತಾತ್ಮರನ್ನು ಕೇವಲ ಸ್ಮರಿಸುವ ದಿನವಲ್ಲ. ಜೊತೆಗೆ ನಾವೆಲ್ಲರೂ ಪರಿಸರ ಸಂರಕ್ಷಣೆ ಹೊಣೆ ಹೊರುವ ದಿನ ಎಂದು ನಮ್ಮ ಕರ್ತವ್ಯಗಳ ಕುರಿತು ತಿಳಿಸಿದರು.  

ಪ್ರಕೃತಿಯಲ್ಲಿನ ಇಂತಹ ಶುದ್ಧ ಗಾಳಿ ನಮಗೆಲ್ಲ ಉಚಿತವಾಗಿ ದೊರೆಯುತ್ತದೆ. ಈ ಪ್ರಕೃತಿಯ ಋಣ ತೀರಿಸುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕಿದೆ. ದೇಶ ಹಾಗೂ ರಾಜ್ಯದಲ್ಲಿ ಅರಣ್ಯ ಸಂರಕ್ಷಣೆಯಲ್ಲಿ ತೊಡಗಿದ ಹಲವರು ಪ್ರಾಣತ್ಯಾಗ ಬಲಿದಾನ ಮಾಡಿದ್ದಾರೆ. ಅವರೆಲ್ಲರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ನ್ಯಾ. ಗಂಗಾದರ ಎಂ.ಸಿ ತಿಳಿಸಿದರು. ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪರಿಸರ ಸಂರಕ್ಷಣೆಯ ಕಾಳಜಿ ಹೊಣೆಗಾರಿಕೆಯನ್ನು ನಿಭಾಯಿಸುತ್ತಿಲ್ಲ. ಪರಿಸರದ ಮೇಲೆ ಮಾನವನ ಅತಿಯಾದ ದುರಾಸೆಯಿಂದಾಗಿ ಹಾನಿ ಮಾಡುತ್ತಾ ಪ್ರಕೃತಿ ಅಸಮತೋಲನಕ್ಕೆ ಕಾರಣರಾಗಿದ್ದೇವೆ.  

ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಮಾತನಾಡಿ ನಮ್ಮ ಉತ್ತಮ ಭವಿಷ್ಯಕ್ಕಾಗಿ ತಮ್ಮ ತ್ಯಾಗ ಬಲಿದಾನದ ಮೂಲಕ ಅರಣ್ಯ ಸಂರಕ್ಷಣೆ ಮಾಡಿದವರನ್ನು ನೆನೆಯೋಣ. ಅರಣ್ಯ ಸಂಪತ್ತು ಕೇವಲ ಮರಗಳು, ಪ್ರಾಣಿಗಳಷ್ಟೇ ಅಲ್ಲ. ಅರಣ್ಯ ಇಲ್ಲದೇ ಮಳೆಯೂ ಇಲ್ಲ. ಜೀವವೂ ಇಲ್ಲ.  ಜೀವನವೂ ಇಲ್ಲ ಎಂಬುದನ್ನು ನಾವೆಲ್ಲರೂ ಅರಿತು ಸಂರಕ್ಷಣೆ ಕಾರ್ಯದಲ್ಲಿ ನಮ್ಮದೇ ಆದ ಕೊಡುಗೆ ನೀಡೋಣ ಎಂದರು. ಅರಣ್ಯ ಸಂರಕ್ಷಣೆಯಲ್ಲಿ ಅನೇಕರ ತ್ಯಾಗ ಬಲಿದಾನ ಸಮರಾ​‍್ಣ ಮನೋಭಾವದಿಂದಾಗಿ ಇಂದು ಅರಣ್ಯಗಳು ಜೀವಂತವಾಗಿವೆ. ಅದಕ್ಕಾಗಿಯೇ ನಾವೆಲ್ಲರೂ ಜೀವಂತವಾಗಿದ್ದೇವೆ ಎಂಬುದನ್ನು ಮರೆಯಬಾರದು.  

ರಾಜ್ಯದಲ್ಲಿ  1966 ರಿಂದ ಈವರೆಗೆ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದ 62 ನೌಕರರು ಹುತಾತ್ಮರಾಗಿದ್ದು ಅವರೆಲ್ಲರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಬಿಂಕದಕಟ್ಟಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.   

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ ವರಿಷ್ಟಾದಿಕಾರಿ ಮಹಾಂತೇಶ ಸಜ್ಜನರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಚಂದ್ರಹಾಸ ವೆರ್ಣೆಕರ್,   ವಾರ್ತಾಧಿಕಾರಿ ವಸಂತ ಮಡ್ಲೂರ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಪ್ರಕಾರ ಪವಾಡಿಗೌಡ್ರ, ಮೇಘನಾ ಎಚ್, ವೀರೇಂದ್ರ ಮರಿಸಬಣ್ಣವರ, ಮಂಜುನಾಥ ಮೇಗಳಮನಿ, ರಾಮಪ್ಪ ಪೂಜಾರ, ಸ್ನೇಹಾ ಕೊಪ್ಪಳ, ವೀರಭದ್ರ​‍್ಪ ಕುಂಬಾರ ಅನ್ವರ ಕೊಲ್ಹಾರ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.