ಗ್ರಾಮ ಮಟ್ಟದಲ್ಲಿ ಕೊರೊನಾ ಕಾರ್ಯಪಡೆ ರಚನೆ: ಸಿಇಓ

ಹಾವೇರಿ:ಎ. 08:   ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಹಾಗೂ ಎಲ್ಲ ಗ್ರಾಮಗಳಲ್ಲೂ ಗ್ರಾಮ ಮಟ್ಟದ ಕರೋನಾ ಕಾರ್ಯಪಡೆಯನ್ನು ರಚಿಸಿ ಜನಸಾಮಾನ್ಯರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಕರೋನಾ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಯಾವುದೇ ಸಂಕಷ್ಟಗಳನ್ನು ಎದುರಿಸಲು ಕರೋನಾ ಗ್ರಾಮ ಪಡೆ ಸಜ್ಜಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ ಅವರು ತಿಳಿಸಿದರು.

ವಾತರ್ಾ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮದ ಬೀಟ್ ಪೊಲೀಸ್ರು, ಗ್ರಾಮ ಆರೋಗ್ಯ ಸಿಬ್ಬಂದಿ, ಅಂಗನವಾಡಿ,  ಆಶಾ ಕಾರ್ಯಕರ್ತರು, ನೊಂದಾಯಿತ ಸ್ಥಳೀಯ ವೈದ್ಯರು ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳನ್ನು ಒಳಗೊಂಡ ಕರೋನಾ ನಿಯಂತ್ರಣ ಕಾರ್ಯಪಡೆಯನ್ನು ರಚಿಸಲಾಗಿದೆ. ಕರೋನಾ ಸೈನಿಕರಿಗೆ ಮಾಸ್ಕ್ಗಳನ್ನು ವಿತರಿಸಲಾಗಿದೆ. ಜೊತೆಗೆ ಸ್ಯಾನಿಟೈಸರ್ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಗ್ರಾಮ ಮಟ್ಟದ ಕಾರ್ಯಪಡೆಯ ಸದಸ್ಯರು ಹಳ್ಳಿಗಳಿಗೆ ಬರುವ ಹೊರ ರಾಜ್ಯ, ವಿದೇಶದಿಂದ ಬಂದವರ ಮಾಹಿತಿಯನ್ನು ಒದಗಿಸುವುದು, ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದುಕೊಂಡು ಹೋಗಿ ಥರ್ಮಲ್ ಸ್ಕ್ರೀನಿಂಗ್ ಮಾಡಿಸುವುದು, ಗ್ರಾಮಗಳಲ್ಲಿರುವ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಕರೋನಾ ಕುರಿತು ತಿಳುವಳಿಕೆ ನೀಡುವುದು, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮದ ಜನರಿಗೆ ಅತೀ ಅವಶ್ಯಕವಾದಂತಹ ಆಹಾರ ಪದಾರ್ಥಗಳು, ಪಡಿತರ ಹಾಗೂ ಜೀವನಾಂಶಕ ವಸ್ತುಗಳನ್ನು ಸಮರ್ಪಕವಾಗಿ ಒದಗಿಸುವಂತೆ ಈಗಾಗಲೇ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

          ಕೋವಿಡ್ ಹಾಸ್ಪಿಟಲ್: ಜಿಲ್ಲಾ ಉಸ್ತುವಾರಿ ಸಚಿವರು , ಉಸ್ತುವಾರಿ ಕಾರ್ಯದಶರ್ಿಗಳ ನಿದರ್ೆಶನದಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕವಾದ 100 ಹಾಸಿಗೆಗಳ ಕೋವಿಡ್ -19 ಚಿಕಿತ್ಸೆ ವಿಶೇಷ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಪ್ರತಿ ತಾಲೂಕಿನಲ್ಲೂ 10 ಹಾಸಿಗೆಯ ಪ್ರತ್ಯೇಕ ಹಾಸಿಗೆಯ ವ್ಯವಸ್ಥೆ ಮಾಡಲಾಗುವುದು ಹಾಗೂ ಕೇಂದ್ರೀಕೃತ ವೆಂಟಿಲೇಷನ್ ಅಳವಡಿಸಿ ಎಲ್ಲ ಹಾಸಿಗೆಗಳಿಗೂ  ಆ್ಯಕ್ಸಿಜನಲ್ ಸಪ್ಲೈ ಆಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಹತ್ತು ವೆಂಟಿಲೇಷನ್ಗಳಿದ್ದು, ಹೆಚ್ಚುವರಿ ವೆಂಟಿಲೇಷನ್ ಖರೀದಿಗೆ ಕ್ರಮವಹಿಸಲಾಗುತ್ತಿದೆ.

       ಹಾವೇರಿ ನಗರದಲ್ಲಿ ಹೆಚ್ಚುವರಿಯಾಗಿ ಜಿಲ್ಲೆಯ ಆಸ್ಪತ್ರೆಯ ಪಕ್ಕದಲ್ಲಿರುವ ಹೆಸ್ಕಾಂ ಕಲ್ಯಾಣ ಮಂಟಪವನ್ನು ಕೋವಿಡ್-19 ಐಸೋಲೆಷನ್ ವಾಡರ್ಿಗ್ ಬಳಸಿಕೊಳ್ಳಲು ಉದ್ದೇಶಿಸಲಾಗಿದ  ಎಂದು ತಿಳಿಸಿದರು.

     ಮನೆ ಮನೆಗೂ ಭೇಟಿ ನೀಡಿ ಆರೋಗ್ಯ ತಪಾಸಣೆ ಕಾರ್ಯವನ್ನು ತ್ವರಿತವಾಗಿ ಆರಂಭಿಸಲಾಗುವುದು. ಗಡಿ ಪ್ರದೇಶದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಹೊರ ಜಿಲ್ಲೆಯಿಂದ ಬರುವವರ ಮೇಲೆ ನಿಗಾ ವಹಿಸಲಾಗುತ್ತಿದೆ. 

           ಬೀಜ, ಗೊಬ್ಬರ, ದಿನಸಿ, ತರಕಾರಿ, ಹಾಲು ಸರಬರಾಜಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಪಡಿತರ ವಿತರಣೆ, ಜನಧನ ಸೇರಿದಂತೆ ವಿವಿಧ ಯೋಜನೆಯಡಿ ಬ್ಯಾಂಕ್ಗಳಲ್ಲಿ ಫಲಾನುಭವಿಗಳು ಹಣ ಡ್ರಾ ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಲಾಗಿದೆ. ಈ ಕುರಿತಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

             ಎ.ಟಿ.ಎಂ.ಗಳಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಫಲಾನುಭವಿಗಳಿಂದ ಸಾಲದ ಕಂತುಗಳಿಗೆ ಹಣ ಜಮಾ ಮಾಡಿಕೊಳ್ಳದಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉಜ್ವಲ ಸಿಲೆಂಡರ್ ಫಲಾನುಭವಿಗಳಿಗೆ ಸಿಲೆಂಡರ್ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಈ ಹಣ ಡ್ರಾ ಮಾಡಿಕೊಂಡು ವಿತರಕರಿಗೆ ಹಣ ಪಾವತಿಸಿ ಸಿಲೆಂಡರ್ ಪಡೆಯಬೇಕು ಎಂದು ತಿಳಿಸಿದರು.