ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚನೆ: ಜಮೀರ್ ಖಾನ್

ಹಾವೇರಿ22:  ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಎಲ್ಲ ಪಕ್ಷದ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು  ಎಂದು ಆಹಾರ ಮತ್ತು ನಾಗರಿಕ ಸಬರಾಬರಾಜು, ಹಜ್ ಹಾಗೂ ವಕ್ಫ್ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಕನರ್ಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸಮಾಡೋಣ. ಪಕ್ಷಬೇಧ ಮರೆತು ಕೆಲಸಮಾಡೋಣ. ಇದಕ್ಕಾಗಿ ವಿಶೇಷವಾದ ಸಮಿತಿ ರಚನೆಮಾಡೋಣ. ಪ್ರತಿ ತಿಂಗಳು ಸಭೆ ನಡೆಸೋಣ, ಹಾವೇರಿಯಲ್ಲಿ ಒಂದು ತಿಂಗಳು ಬೆಂಗಳೂರಿನಲ್ಲಿ ಮತ್ತೊಂದು ತಿಂಗಳಿನಂತೆ ಸಭೆ ನಡೆಸಿ ಚಚರ್ಿಸೋಣ. ಜಿಲ್ಲೆಯ ಸಮಸ್ಯೆಗಳನ್ನು ಪಟ್ಟಿಮಾಡಿ ಬೆಂಗಳೂರಿನ ಸಭೆಯಲ್ಲಿ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಧಾನ ಕಾರ್ಯದಶರ್ಿಗಳು ಹಾಗೂ ಆಯುಕ್ತರನ್ನು ಆಹ್ವಾನಿಸಿ ಪರಿಹಾರ ಕಂಡುಕೊಳ್ಳೋಣ ಎಂದು ತಿಳಿಸಿದರು.

ಸಭೆಯ ಆರಂಭದಲ್ಲೇ ಬೈರನಪಾದಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ನಡೆದಿದೆ ಎಂದು ಶಾಸಕ ಬಿ.ಸಿ.ಪಾಟೀಲ ಸೇರಿದಂತೆ ವಿವಿಧ ಶಾಸಕರು ಆಕ್ಷೇಪಣೆ ವ್ಯಕ್ತಪಡಿಸಿದರು. ಈ ಕುರಿತಂತೆ ಸಮಗ್ರ ತನಿಖೆಗೆ ಜಿಲ್ಲಾ ಮಟ್ಟದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಹಿಸಲು ನಿರ್ಧರಿಸಲಾಯಿತು.

ಮುಂಗಾರು ಮತ್ತು ಹಿಂಗಾರು ಹಂಗಾಮಿನ ಮಳೆ ಅಭಾವದಿಂದ ತೀವ್ರವಾದ ಬೆಳೆ ನಷ್ಟವಾಗಿದೆ. ಸಕರ್ಾರ ಕೇವಲ ರಾಣೇಬೆನ್ನೂರು ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಣೆ ಮಾಡಿದೆ. ಇಡಿ ಹಾವೇರಿ ಜಿಲ್ಲೆಯಲ್ಲಿ ಬೆಳೆಹಾನಿಯಾಗಿದೆ. ಬರಪೀಡಿತ ಜಿಲ್ಲೆಯಂದು ಘೋಷಣೆ ಮಾಡಬೇಕು, ಬರ ಘೋಷಣೆ ಹಾಗೂ ಬರಪರಿಹಾರ ಎಂದು ಸಕರ್ಾರಕ್ಕೆ ಒತ್ತಾಯಿಸಲು ಶಾಸಕರಾದ ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ, ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ ಅವರುಗಳು ಸಭೆಯಲ್ಲಿ ಮನವಿ ಮಾಡಿಕೊಂಡರು.

ಈ ಕುರಿತಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ಖಾನ್ ಅವರು ನಾನು ರಾಜ್ಯ ಬರ ಅಧ್ಯಯನ ಸಮಿತಿಯ ಸದಸ್ಯನಾಗಿದ್ದೇನೆ. ಜಿಲ್ಲೆಯ ಸ್ಥಿತಿಗತಿ ಕುರಿತಂತೆ ಪೂರ್ಣ ಮಾಹಿತಿ ಪಡೆದು ಬರ ಘೋಷಣೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಸಚಿವ ಜಮೀರ್ ಅಹ್ಮದ್ಖಾನ್ ಅವರು ವಿವರಿಸಿದರು.

ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಕರ್ಾರ ಗಂಭೀರವಾಗಿ ಪರಿಗಣಿಸಿದೆ. ತಕ್ಷಣ ಅಧಿಕಾರಿಗಳು ಕ್ರಿಯಾಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಪಟ್ಟಿಮಾಡಬೇಕು. ಪಯಾರ್ಯವಾಗಿ ನೀರಿನ ಮೂಲಗಳನ್ನು ಗುರುತಿಸಿಕೊಳ್ಳಬೇಕು. ಜನರು ನೀರಿನ ಸಮಸ್ಯೆಯಿಂದ ಬಳಲಿದರೆ, ಕಾರ್ಯ ವಿಳಂಬಮಾಡಿದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.

     ವಾರದಲ್ಲಿ ಸಭೆ: ಮೊರಾಜರ್ಿ ದೇಸಾಯಿ ವಸತಿ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ನೀಗಿಸಲು ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಶಾಸಕರು ಗಮನಕ್ಕೆ ತಂದಾಗ ವಸತಿ ನಿಲಯಗಳ ವ್ಯವಸ್ಥಪಾಕ ನಿದರ್ೆಶಕರೊಂದಿಗೆ ದೂರವಾಣಿ ಸಂಪರ್ಕಮಾಡಿ 15ದೊಳಗಾಗಿ ಜಿಲ್ಲೆಯ ವಿವಿಧ ಇಲಾಖೆಯ ವಸತಿ ಶಾಲೆಗಳ ಕುಡಿಯುವ ನೀರಿನ ಸಮಸ್ಯೆಗಳನ್ನು ನೀಗಿಸಲು ತಿಳಿಸಿದರು.

ಅರಣ್ಯ ಪ್ರದೇಶದಲ್ಲಿ ಕುಡಿಯುವ ನೀರಿನ ಕೊಳವೆಬಾವಿ ಕೊರೆಸಲು ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿ ದೂರು ದಾಖಲಿಸುವ ಕುರಿತಂತೆ ಶಾಸಕರು ಸಭೆಯ ಗಮನಕ್ಕೆ ತಂದಾಗ ಜಿಲ್ಲಾ ಅರಣ್ಯ ಡಿ.ಎಫ್.ಓ ಗಿರೀಶ ಅವರಿಗೆ ಸೂಚನೆ ನೀಡಿ ಕುಡಿಯುವ ನೀರಿನ ಸಮಸ್ಯೆಗೆ ಅಡ್ಡಿಪಡಿಸಬೇಡಿ. ಈ ಕುರಿತಂತೆ ನಿಮ್ಮ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಚಚರ್ಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಡಿಸೆಂಬರ್ 22 ರಿಂದ 30ರೊಳಗಾಗಿ ಮತ್ತೊಮ್ಮೆ ಕೆಡಿಪಿ ಸಭೆ ಕರೆಯೋಣ. ಈ ಸಭೆಯಲ್ಲಿ ತೆಗೆದುಕೊಂಡ ತೀಮರ್ಾನಗಳು, ಸೂಚನೆಗಳನ್ನು ಮುಂದಿನ ಸಭೆಯಲ್ಲಿ ಅನುಷ್ಠಾನಗೊಳಿಸಿ ವರದಿ ಸಲ್ಲಿಸಬೇಕು ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಶಾಸಕರಾದ ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ, ನೆಹರು ಓಲೇಕಾರ, ವಿರಪಾಕ್ಷಪ್ಪ ಬಳ್ಳಾರಿ, ಜಿ.ಪಂ.ಉಪಾಧ್ಯಕ್ಷೆ ಶ್ರೀಮತಿ ದೀಪಾ ಅತ್ತಿಗೇರಿ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಶ್ರೀಮತಿ ಲೀಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಜಿ.ಪಂ.ಉಪಕಾರ್ಯದಶರ್ಿ ಜಿ.ಗೋವಿಂದಸ್ವಾಮಿ ಹಾಗೂ ಜಿ.ಪಂ.ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು, ನಾಮನಿದರ್ೆಶಿತ ಕೆಡಿಪಿ ಸದಸ್ಯರು ಉಪಸ್ಥಿತರಿದ್ದರು.