ಮಾಜಿ ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ನಿಧನಕ್ಕೆ ರಾಜುಗೌಡ ಸಂತಾಪ
ದೇವರಹಿಪ್ಪರಗಿ 11: ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ. ಕೃಷ್ಣ(92) ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖಭರಿತನಾಗಿರುವೆ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ತಿಳಿಸಿದ್ದಾರೆ.
ಎಸ್.ಎಮ್. ಕೃಷ್ಣಾ ಅವರ ಸರಳತೆಯ ಸ್ವಭಾವ, ಸಜ್ಜನಿಕೆಯ ಗುಣಗಳು ನನಗೆ ಬಹಳ ಇಷ್ಟವಾಗಿದ್ದವು. ಯಾವುದೇ ಒಂದು ಬಿಕಟ್ಟಿನ ಸಮಸ್ಯೆಯನ್ನು ಅತ್ಯಂತ ಚಾಣಾಕ್ಷತನದಿಂದ ಬಗೆಹರಿಸುವ ಶಕ್ತಿ ಅವರಲ್ಲಿತ್ತು ಎಂದರೆ ತಪ್ಪಾಗಲಾರದು. ಮುಖ್ಯಮಂತ್ರಿ ಅವಧಿಯಲ್ಲಿ ರಾಜ್ಯವು ಐಟಿ-ಬಿಟಿ ಕ್ಷೇತ್ರದಲ್ಲಿ ಅತ್ಯಂತ ಗಣನೀಯ ಬೆಳವಣಿಗೆ ಸಾಧಿಸಿದೆ. ಅವರ ಸಾವಿನಿಂದ ದೇಶವು ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೃತರ ಕುಟುಂಬಕ್ಕೆ ಸಾಂತ್ವನವನ್ನು ತಿಳಿಸುತ್ತಾ, ಅಗಲಿದ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲೆಂದು ಆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ರಾಜುಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.