ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ವಿಧಿವಶ
Former Chief Minister SM Krishna passed away
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಇಂದು ವಿಧಿವಶರಾಗಿದ್ದಾರೆ. ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ‘ಶೋಕಾಚರಣೆ ಸಮಯದಲ್ಲಿ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುತ್ತಿದ್ದು, ಅಂತಿಮ ವಿಧಿವಿಧಾನಗಳನ್ನು ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುತ್ತಿದೆ.
ನಾಳೆ ಬೆಳಗ್ಗೆಯೇ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೋಮನಹಳ್ಳಿಗೆ ಸ್ಥಳಾಂತರಿಸಲಾಗುತ್ತಿದ್ದು. ಬಳಿಕ ಶಾಲೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು, ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 