ಅಹಮದಾಬಾದ್, ಜೂನ್ 28: ಗುಜರಾತ್ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ವೈದ್ಯರು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದರು. ನಡೆಸಲಾದ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದುಕೊಂಡ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವಘೇಲಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ವಿವರ ಪಡೆದುಕೊಂಡರು ಎಂದು ವರದಿಯಾಗಿದೆ.