ಪಟ್ಟಣದಲ್ಲಿ ಸಾರ್ವಜನಿಕರಿಗೆ ಮೂಲ ಸೌಕರ್ಯ ಒದಗಿಸುವುದರಲ್ಲಿ ಬ್ಯಾಡಗಿ ಪುರಸಭೆ ಮುಂದು ಮಾಜಿ ಶಾಸಕ ಸುರೇಶ್ ಗೌಡ ಪಾಟೀಲ್
Former MLA Suresh Gowda Patil leads Byadgi Municipality in providing basic amenities to the public i
ಬ್ಯಾಡಗಿ 23 : ಪಟ್ಟಣದ ಸಾರ್ವಜನಿಕರಿಗೆ ಕುಡಿಯ ನೀರು ಒಳಚರಂಡಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜೊತೆಗೆ ಪಟ್ಟಣ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲುತ್ತಿರುವ ಪುರಸಭೆಯ ಕೆಲಸವು ಹೆಮ್ಮೆಯ ವಿಷಯ ಎಂದು ಮಾಜಿ ಶಾಸಕ ಸುರೇಶ್ ಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಹಳೆ ಪುರಸಭೆ ಎದುರು ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಐದು ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಡಿಜಿಟಲ್ ಬೋರ್ಡ್ ಉದ್ಘಾಟಿಸಿ ಮಾತನಾಡಿದವರು. ಬ್ಯಾಡಗಿ ಎಂಬ ಹೆಸರು ಇಡೀ ಜಗತ್ತಿನ ಭೂಪಟದಲ್ಲಿಯೇ ಹೆಸರುವಾಸಿಯಾಗಿದ್ದು ದೇಶದಲ್ಲಿಯೇ ನಂಬರ್ ವನ್ ಮೆಣಸಿನಕಾಯಿ ಮಾರುಕಟ್ಟೆ ನಮ್ಮದಾಗಿದ್ದು ಇಲ್ಲಿ ಜನಸಂಖ್ಯೆಯು ಹೆಚ್ಚಾಗುತ್ತಿದೆ ಕಳೆದ ಕೆಲವು ವರ್ಷಗಳಿಂದ ಜನಸಂಖ್ಯೆ ಇರುತ್ತದೆ ಈಗಿರುವಾಗ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿ ಕೊಡುವ ಮೂಲಕ ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರಥಮ ಪುರಸಭೆ ಬ್ಯಾಡಗಿಯ ಪುರಸಭೆಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ವಿನಯ್ ಕುಮಾರ್ ಹೊಳೆಪ್ಪಗೊಳ. ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನ್ನ ಎರೆಸೀಮೆ. ಮುಖಂಡರಾದ ಮಜಿದ್ ಮುಲ್ಲಾ. ರಫೀಕ್ ಮುದುಗಲ. ರಾಮಣ್ಣ ಕೋಡಿಹಳ್ಳಿ .ಮಂಜೂರ ಹಕ್ಕಿಮ್ ಹಾಗೂ ಮಾಲತೇಶ್ ಹಳ್ಳಿ ಸೇರಿದಂತೆ ಪುರಸಭೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 