ವಾಲ್ಮೀಕಿ ಸಮುದಾಯದ ಕುರಿತು ಮಾಜಿ ಸಂಸದ ರಮೇಶ ಕತ್ತಿ ಅವಹೇಳನಕಾರಿ ಹೇಳಿಕೆ
Former MP Ramesh Katti's derogatory statement about the Valmiki community
ವಾಲ್ಮೀಕಿ ಸಮುದಾಯದ ಕುರಿತು ಮಾಜಿ ಸಂಸದ ರಮೇಶ ಕತ್ತಿ ಅವಹೇಳನಕಾರಿ ಹೇಳಿಕೆ
ಯರಗಟ್ಟಿ 23: ವಾಲ್ಮೀಕಿ ಸಮುದಾಯದ ಕುರಿತು ಮಾಜಿ ಸಂಸದ ರಮೇಶ ಕತ್ತಿ ಅವಹೇಳನಕಾರಿ ಹೇಳಿಕೆನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತಿದಲ್ಲಿ ಮಹರ್ಷಿ ವಾಲ್ಮಿ?ಕಿ ಕ್ಷೆ?ಮಾಭಿವೃದ್ಧಿ ಸಂಘದವರು ಮಂಗಳವಾರ ತಹಸೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಮೂಲಕ ಸರಕಾರಕ್ಕೆ ಮನವಿ ರವಾನಿಸಿದರು.ಎಸ್. ಎಚ್. ನಾಯ್ಕರ ಮಾತನಾಡಿ, “ಬೆಳಗಾವಿಯಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿರಮೇಶ ಕತ್ತಿಯವರು ವಾಲ್ಮೀಕಿ ಸಮಾಜದ ಹೆಸರನ್ನು ಬಳಸಿ ಅವಾಚ್ಯವಾಗಿ ಮಾತನಾಡಿದ್ದಾರೆ. ಸಮಾಜದ ಜನರಿಗೆ ಇದು ನೋವನ್ನುಂಟು ಮಾಡಿದೆ. ಶೀಘ್ರ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು”, ಎಂದು ಆಗ್ರಹಿಸಿದರು. ನಂತರ ಯರಗಟ್ಟಿ ಪೊಲೀಸ್ ಠಾಣೆಗೆ ತೆರಳಿ ಪಿಎಸ್ ಐ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಸವರಾಜ ಪೂಜೇರ, ಶಂಕರೆಪ್ಪ ಕುರುಬಗಟ್ಟಿ, ಬಸವರಾಜ ಸತ್ತೂರಿ, ವಿಠ್ಠಲ ನಾಯ್ಕ, ಸಿದ್ದಪ್ಪ ಮಾಳಗಿ, ಫಕ್ಕೀರ್ಪ ದಾಸಪ್ಪನವರ, ಫಕ್ಕೀರ್ಪ ಕುರಿ, ವಿಠ್ಠಲ ಹಲಗಲಿ, ನಕುಲ ಮಾಳಕ್ಕನವರ, ಕೃಷ್ಣಗೌಡ ಪಾಟೀಲ, ಅಶೋಕ ನಾಯ್ಕರ, ಲಕ್ಷ್ಮಣ ಕರಗುಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 