ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ : ಬೆಳಗಾವಿ ಅಧಿವೇಶನ ರದ್ದು
ಬೆಳಗಾವಿ : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ ಆಗಿರುವ ಹಿನ್ನೆಲೆಯಲ್ಲಿ ಡಿ. 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಅವರು ತಿಳಿಸಿದ್ದಾರೆ.
ಗುರುವಾರ ರಾತ್ರಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.27ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ನಿಗದಿಯಾಗಿತ್ತು. ಈ ಕಾಂಗ್ರೆಸ್ ವರಿಷ್ಠರು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದರು. ಶುಕ್ರವಾರ ಬೆಳಿಗ್ಗೆ ಮೌನಾಚರಣೆ ಮಾಡುವದನ್ನು ಬಿಟ್ಟು ಎಲ್ಲ ಕಾರ್ಯಕ್ರಮ ಗಳನ್ನು ರದ್ದು ಮಾಡಲಾಗಿದೆ ಎಂದು ಡಿಕೆಶಿ ಹೇಳಿದರು.
ಆದರೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ದಿಢೀರ್ ರದ್ದುಗೊಳಿಸಲಾಗಿದೆ.
ಕಾಂಗ್ರೆಸ್ ನಾಯಕರು ದೆಹಲಿಗೆ ದೌಡಾಯಿಸಿ, ಮಾಜಿ ಪ್ರಧಾನಿ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ಕಾರ್ಯಕ್ರಮದ ಮುಂದಿನ ನಡೆಯ ಬಗ್ಗೆ ಶೀಘ್ರವಾಗಿ ತಿಳಿಸುವದಾಗಿ ಡಿಕೆಶಿ ಹೇಳಿದ್ದಾರೆ.