ಬೆಂಗಳೂರು, ಏ 13, ಕೇಂದ್ರ ಸರ್ಕಾರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಸೋಮವಾರ ಬೆಳಗ್ಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.ಅವರು ಹಲವು ತಿಂಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ವಿಧಿವಶರಾದರು ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.ಎಂ.ವಿ.ರಾಜಶೇಖರ್ ಅವರು 1928ರ ಸೆಪ್ಟೆಂಬರ್ 12 ರಂದು ಜನಿಸಿದ್ದರು. ಅವರು ಕನಕಪುರ ತಾಲೂಕಿನ ಮರಲವಾಡಿ ಗ್ರಾಮಕ್ಕೆ ಸೇರಿದವರು. ಅವರು ಸ್ವಾತಂತ್ರ್ಯ ಹೋರಾಟದಲ್ಲೂ ತೊಡಗಿಸಿಕೊಂಡಿದ್ದರು. ಅವರಿಗೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು. ಸಮಾಜದ ಅಭಿವೃದ್ಧಿಗೆ ಅವರ ಕೊಡುಗೆ ಗುರುತಿಸಿ ಶ್ರೀಲಂಕಾ ರಾಷ್ಟ್ರೀಯ ಸರ್ಕಾರೇತರ ಸಂಸ್ಥೆ 2010 ರಲ್ಲಿ “ವಿಶ್ವಾಶ್ರಣ” ಪ್ರಶಸ್ತಿ ನೀಡಿ ಗೌರವಿಸಿತ್ತು.ಅವರು ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು. ಅವರು ಕೇಂದ್ರ ಯೋಜನಾ ಖಾತೆಯ ರಾಜ್ಯ ಸಚಿವರೂ ಆಗಿದ್ದರು.