ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ
Former chairman of Vidhan Sabha N. Tippanna passed away
ಬಳ್ಳಾರಿ: ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ (97) ಶುಕ್ರವಾರ ಬೆಳಗಿನ ಜಾವ ನಿಧನ ಹೊಂದಿದರು.
ತಿಪ್ಪಣ್ಣ ಇವರಿಗೆ ಒಬ್ಬ ಪುತ್ರರಿದ್ದಾರೆ. ಇವರ ಅಂತ್ಯ ಸಂಸ್ಕಾರ ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ಶನಿವಾರ ಜರುಗಲಿದೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾಜಕೀಯ ಹಿನ್ನೆಲೆ : ವಕೀಲರಾಗಿ ಕಾರ್ಯ ಆರಂಭಿಸಿ , ನಂತರ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದರು. ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್‌ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. 2012ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿ ತಿಪ್ಪಣ್ಣ ಆಯ್ಕೆಯಾಗಿದ್ದರು. ಪ್ರತಿಷ್ಠಿತ ವೀರಶೈವ ವಿದ್ಯಾವರ್ದಕ ಸಂಘದ ಅಧ್ಯಕ್ಷ ಹಾಗೂ ಇನ್ನಿತರ ಹುದ್ದೆಗಳಲ್ಲಿ ಅವರು 20 ವರ್ಷ ಕೆಲಸ ಮಾಡಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 