ಬೆಂಗಳೂರು, 11 ಅಧಿಕ ರಕ್ತದೊತ್ತಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇಂದು ಬೆಳಗ್ಗೆ
6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ
ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇತ್ತೀಚಿಗೆ ಉಪಚುನಾವಣೆಯಲ್ಲಿ
ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಹೀಗಾಗಿ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ
ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ, ಅಲ್ಲಿ ಅವರು ದಾಖಲಾಗುವುದಿಲ್ಲ.
ತಪಾಸಣೆಯ ಬಳಿಕ ಅವರು ವಾಪಸ್ ಮನೆಗೆ ಕಳುಹಿಸಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಉಪಚುನಾವಣೆಯ ಕಾಂಗ್ರೆಸ್ ನೇತೃತ್ವ
ವಹಿಸಿದ್ದ ಸಿದ್ದರಾಮಯ್ಯ, 15 ಕ್ಷೇತ್ರಗಳಲ್ಲಿ 2 ಕ್ಷೇತ್ರದಲ್ಲಿ ಮಾತ್ರ ಪಕ್ಷವನ್ನು ಗೆಲ್ಲಿಸುವಲ್ಲಿ
ಯಶಸ್ವಿಯಾಗಿದ್ದರು. ಬಳಿಕ ಸೋಲಿನ ನೈತಿಕ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ
ನೀಡಿದ್ದರು.