ಬೆಂಗಳೂರು, ನ.12 : ಎದೆ ನೋವು, ಅಧಿಕ ರಕ್ತದೊತ್ತಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ನಗರದ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯರಾತ್ರಿ 1.30 ರ ಸುಮಾರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ವೇಳೆ ಯಾರಿಗೂ ಭೇಟಿಗೆ ಅವಕಾಶ ನೀಡದಿರಲು ಕುಟುಂಬದವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ದಿನಗಳ ಹಿಂದಷ್ಟೇ ಡಿ.ಕೆ. ಶಿವಕುಮಾರ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಡಿಸ್ಚಾರ್ಜ್ ಆಗಿದ್ದರು.