ಮೈಸೂರು ,ನ 18 : ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಮೇಲೆ ನಿನ್ನೆ ತಡೆರಾತ್ರಿ ಕೊಲೆ ಯತ್ನ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್ ಮೇಲೆ ಯುವಕನೋರ್ವ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಗಾಯಗೊಂಡ ತನ್ವೀರ್ ಸೇಠ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಸುಮಾರು 11.30 ಗಂಟೆ ಸಂದರ್ಭದಲ್ಲಿ ಘಟನೆ ನಡೆದಿದೆ. ಶಾಸಕರು ಆಪ್ತರ ಮದುವೆಯಲ್ಲಿ ಭಾಗಿಯಾಗಿದ್ದರು. ಬನ್ನಿಮಂಟಪದಲ್ಲಿ ನಡೆಯುತ್ತಿದ್ದ ಈ ಕಾರ್ಯಕ್ರಮದಲ್ಲಿ ತನ್ವೀರ್ ಸೇಠ್ ಕೂಡ ಇದ್ದರು.ಈ ವೇಳೆ ಫರಾನ್ ( 24 ) ಎಂಬ ಯುವಕ ಏಕಾಏಕಿ ತನ್ವೀರ್ ಕತ್ತಿಗೆ ಚಾಕು ಹಾಕಿದ್ದಾನೆ. ಗಾಯಗೊಂಡ ತನ್ವೀರ್ ಸೇಠ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಫರಾನ್ನ್ನು ಪೊಲೀಸರ ಸ್ಥಳದಲ್ಲಿದ್ದವರು ಫರಾನ್ ನನ್ನು ವಶಕ್ಕೆ ಪಡೆದಿದ್ದಾರೆ. ಈತ ಕೊಲೆ ಯತ್ನ ಮಾಡಿರುವುದಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ವೀರ್ ಸೇಟ್ ಅವರನ್ನು ಇಲ್ಲಿಯ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 2 ಗಂಟೆಗಳ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.ಸದ್ಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ ಚಿಕಿತ್ಸೆಗೆ ಹೇಗೆ ಸ್ಪಂದಿಸುತ್ತಾರೆ ಎನ್ನುವ ಆಧಾರದ ಮೇಲೆ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಜಮಾಯಿಸಿದ ತನ್ವಿರ್ ಸೇಠ್ ಅಭಿಮಾನಿಗಳು ಜಮಾಯಿಸಿದ್ದಾರೆ. ಆಸ್ಪತ್ರೆ ಸುತ್ತಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ತನ್ವಿರ್ ಸೇಠ್ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆಯಲು ಅಭಿಮಾನಿಗಳು ಆಗಮಿಸುತ್ತಿದ್ದಾರೆ.