ಭ್ರಷ್ಟಾಚಾರ: ಪಾಕ್ ಮಾಜಿ ಪ್ರಧಾನಿ ಷರೀಫ್ಗೆ 10 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್ 06: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಪುತ್ರಿ ಮರ್ಯಮ್ ಅವರಿಗೆ ಏಳು ವರ್ಷ ಶಿಕ್ಷೆ ವಿಧಿಸಿ ನ್ಯಾಷನಲ್ ಅಕೌಂಟಬಿಲಿಟಿ ಬ್ಯೂರೊ(ಎನ್ಎಬಿ) ಕೋಟರ್್ ಶುಕ್ರವಾರ ತೀಪರ್ು 

ನೀಡಿದೆ. 

ಲಂಡನ್ ನಲ್ಲಿ ನಾಲ್ಕು ಐಷಾರಾಮಿ ಫ್ಲಾಟ್ ಗಳನ್ನು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಹಾಗೂ ಪುತ್ರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 

ಪನಾಮ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿ ನವಾಜ್ ಷರೀಫ್ ಅವರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅಜರ್ಿಯನ್ನು ಕೋಟರ್್ ತಿರಸ್ಕರಿಸಿದೆ. 

ನವಾಜ್ ಷರೀಫ್ ಅವರು ಅಕ್ರಮ ಸಂಪಾದನೆ ಮತ್ತು ತೆರಿಗೆ ವಂಚನೆಯಿಂದ ಗಳಿಸಿದ ಕಪ್ಪು ಹಣವನ್ನು ಅಂತರಾಷ್ಟ್ರೀಯ ಬ್ಯಾಂಕ್ಗಳಲ್ಲಿ ಹಾಗೂ ಲಂಡನ್ ಸೇರಿದಂತೆ ಹಲವು ದೇಶಗಳಲ್ಲಿ ಆದಾಯಕ್ಕೂ ಮೀರಿ ಆಸ್ತಿ ಹೊಂದಿರುವುದನ್ನು ಪನಾಮ ಪೇಪಸರ್್ ಲೀಕ್ ಮಾಡಿತ್ತು.

ಪನಾಮಾ ಪೇಪಸರ್್ ಪ್ರಕರಣದಲ್ಲಿ ಷರೀಫ್ ಭ್ರಷ್ಟಾಚಾರ ಬಯಲುಗೊಂಡಿತ್ತು. ಇದರ ಬಳಿಕ ನವಾಜ್ ಷರೀಫ್ ಪ್ರಧಾನಿ ಹುದ್ದೆಯಿಂದ ಅನರ್ಹಗೊಂಡಿದ್ದರು.