ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಾಜಿ ಸೈನಿಕರ ಕಾವಲು : ಸಾರ್ವಜನಿಕರಿಂದ ಪ್ರಶಂಸೆ
Former soldiers guard SSLC exams: Praise from the public
ರೋಣ (ಗದಗ) 28: ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಹಿನ್ನೆಲೆ ಗದಗ ಜಿಲ್ಲೆಯ ರೋಣ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಹಾಗೂ ಭದ್ರತೆ ಕಾಪಾಡಲು ಮಾಜಿ ಸೈನಿಕರ ಸಂಘದ ಸದಸ್ಯರು ಸ್ವಯಂಪ್ರೇರಣೆಯಿಂದ ಸೇವೆ ಸಲ್ಲಿಸುತ್ತಿರುವುದು ಗಮನಾರ್ಹವಾಗಿದೆ.ತಾಲೂಕಿನ ವಿವಿಧ ಗ್ರಾಮಗಳ ಮಾಜಿ ಸೈನಿಕರನ್ನು ಪರೀಕ್ಷಾ ಅವಧಿಯಲ್ಲಿ ನಿಯೋಜಿಸಲಾಗಿದ್ದು, ಅವರು ಪೊಲೀಸ್ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಯೊಂದಿಗೆ ಕೈಜೋಡಿಸಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಹಕರಿಸುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಈ ಸೇವೆಯನ್ನು ಸಲ್ಲಿಸುತ್ತಿರುವುದು ವಿಶೇಷ.ಶನಿವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ ಅವರು ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಆಕಸ್ಮಿಕ ಭೇಟಿ ನೀಡಿದ ಸಂದರ್ಭದಲ್ಲಿ, ಕೇಂದ್ರದ ಮುಂಭಾಗ ಹಾಗೂ ಹಿಂಭಾಗಗಳಲ್ಲಿ ಮಾಜಿ ಸೈನಿಕರು ಪೊಲೀಸರಂತೆ ಪಹರೆ ನಿಂತು ವಿದ್ಯಾರ್ಥಿಗಳ ಪರೀಕ್ಷೆಗೆ ಯಾವುದೇ ಅಡಚಣೆ ಉಂಟಾಗದಂತೆ ಕಾವಲು ಕಾಯುತ್ತಿರುವುದು ಗಮನಸೆಳೆಯಿತು.ವಿದ್ಯಾರ್ಥಿಗಳಿಗೆ ಅನುಕೂಲಕರ ಹಾಗೂ ಶಾಂತ ವಾತಾವರಣ ನಿರ್ಮಿಸಲು ಮಾಜಿ ಸೈನಿಕರ ಸೇವೆ ಮಹತ್ವದ್ದಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ವಿವಿಧ ವಲಯಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಮಾಜಿ ಸೈನಿಕರ ಸೇವಾ ಭಾವನೆಗೆ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 