ಸಂಕಷ್ಟ ಸಮನ್ವಯ ಸೂತ್ರ ರೂಪಿಸಿ ರೈತರಿಗೆ ನೀರು ಒದಗಿಸಿ: ದೊಡ್ಡಪ್ಪ ದೇಸಾಯಿ
Formulate a distress-sharing formula and provide water to farmers: Doddappa Desai
ಕೊಪ್ಪಳ, ಜು.30: ಮಳೆ ಕೊರತೆಯಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುಂಗಭದ್ರಾ ಜಲಾಶಯದ ಲಭ್ಯ ನೀರನ್ನು ಸಮನ್ವಯದೊಂದಿಗೆ ಹಂಚಿಕೆ ಮಾಡಿ ರೈತರಿಗೆ ನೀರು ಒದಗಿಸಬೇಕು ಎಂದು ರೈತ ಮುಖಂಡ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ದೊಡ್ಡಪ್ಪ ದೇಸಾಯಿ ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಕೊರತೆಯಿಂದ ಬೆಳೆಗಳು ಹಾನೀಗೀಡಾಗುವ ಆತಂಕ ಎದುರಾಗಿದೆ. ನೀರಿನ ಲಭ್ಯತೆಯನ್ನು ಆಧರಿಸಿ ಎಷ್ಟು ಎಕರೆ ಪ್ರದೇಶಕ್ಕೆ ನೀರು ಪೂರೈಸಬಹುದು ಎಂಬುದರ ಕುರಿತು ಲೆಕ್ಕಾಚಾರ ಮಾಡಿ, ರೈತರೊಂದಿಗೆ ಸಮಾಲೋಚನೆ ನಡೆಸಿ ನ್ಯಾಯಸಮ್ಮತವಾಗಿ ನೀರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದರೆ ಮೇವು ಹಾಗೂ ಆಹಾರಧಾನ್ಯಗಳ ಕೊರತೆ ಉಂಟಾಗಿ ರೈತರು ಮತ್ತು ಗ್ರಾಮೀಣ ಆರ್ಥಿಕತೆಗೆ ಗಂಭೀರ ಹೊಡೆತ ಬೀಳುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ರೈತರ ಹಿತ ಕಾಪಾಡಬೇಕು ಎಂದು ಅವರು ಹೇಳಿದರು.
ನೀರಾವರಿ ಸಲಹಾ ಸಮಿತಿ ಸಭೆಗಳನ್ನು ಬೆಂಗಳೂರಿನಲ್ಲಿ ನಡೆಸುವ ಬದಲು ಸ್ಥಳೀಯ ಮಟ್ಟದಲ್ಲೇ ಆಯೋಜಿಸಿ, ರೈತರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳಬೇಕು. ಜನಪ್ರತಿನಿಧಿಗಳು ರೈತರ ಪರವಾಗಿ ಪರಿಣಾಮಕಾರಿ ಮಧ್ಯಸ್ಥಿಕೆ ವಹಿಸಬೇಕು ಎಂದು ದೇಸಾಯಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಗಂಗಾವತಿಯ ಪ್ರಸಾದ್ ರೆಡ್ಡಿ, ಕಾರಟಗಿಯ ನಾಗಪ್ಪ ಸಿಂಗನಾಳ, ಚಂದ್ರಶೇಖರ ಗೋನಾಳ ಹೇರೂರು, ಪಂಪಾಪತಿ ಕಾರಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 