ಅರಳಿಹಳ್ಳಿ ತಾಂಡದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ
Foundation stone laid for CC road development work in Aralihalli Thanda
ಲೋಕದರ್ಶನ ವರದಿ
ಕಂಪ್ಲಿ 08: ತಾಲೂಕಿನ ಸಣಾಪುರ ಗ್ರಾಪಂಯ ಅರಳಿಹಳ್ಳಿ ತಾಂಡದಲ್ಲಿ 2026-27ನೇ ಸಾಲಿನ ತಾಂಡ ಅಭಿವೃದ್ಧಿ ನಿಗಮದ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯ ಮುಖಂಡರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.ನಂತರ ಮುಖಂಡ ಕೆ.ಲಿಂಗಪ್ಪ ಮಾತನಾಡಿ, ಅರಳಿಹಳ್ಳಿ ತಾಂಡಕ್ಕೆ ಹೆಚ್ಚಿನ ಮುತುವರ್ಜಿವಹಿಸಿ, ಸಾಕಷ್ಟು ಅಭಿವೃದ್ಧಿ ಕಾರ್ಯಗಳೊಂದಿಗೆ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಈಗ ಸಿಸಿ ರಸ್ತೆ ಅಭಿವೃದ್ಧಿ ಚಾಲನೆ ಸಿಕ್ಕಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ಕಾಲ ಮಿತಿಯಲ್ಲಿ ಪೂರ್ಣಗೊಳಿಸಬೇಕು. ಕ್ಷೇತ್ರದಲ್ಲಿ ಜನಪರ ಸೇವೆಯೊಂದಿಗೆ ಮೂಲಸೌಕರ್ಯ ಕಲ್ಪಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಪೇಂಟರ್ ಮಸ್ತಾನ್, ಎ.ಕೆ.ಗವಿಸಿದ್ದಪ್ಪ, ಇಟಗಿ ವಿರೇಶ ಸೇರಿದಂತೆ ಸ್ಥಳೀಯರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 