ಆಯುಷ್ಮಾನ್ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ
Foundation stone laid for construction of Ayushman Health Center
ಸವಣೂರ 09 : ಆಯುಷ್ಮಾನ್ ಯೋಜನೆ ಅಡಿ ಬಡವರಿಗೆ 5 ಲಕ್ಷದ ವರೆಗೆ ಎಲ್ಲ ರೀತಿಯ ಆರೋಗ್ಯ ಸೇವೆ ಉಚಿತವಾಗಿ ದೊರೆಯುತ್ತವೆ.ಬಡವರಿಗೆ ಆರೋಗ್ಯ ಸೇವೆ ನಿಲುಕುತ್ತಿಲ್ಲ ಎನ್ನುವ ಕಾರಣಕ್ಕೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಆಯುಷ್ಮಾನ ಯೋಜನೆ 2017 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆರಂಭವಾಗಿದೆ. 5 ಲಕ್ಷ ರೂ. ವರೆಗೂ ಯಾವುದೇ ರೀತಿಯ ಚಿಕಿತ್ಸೆಗೆ ಕೇಂದ್ರ ಸರ್ಕಾರ ಹಣ ನೀಡುತ್ತದೆ. ಬಡವರಿಗೆ ಆರೋಗ್ಯ ಸೇವೆ ನಿಲುಕುತ್ತಿಲ್ಲ ಎನ್ನುವ ಕಾರಣಕ್ಕೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆ ಮಾಡಿದ್ದಾರೆ. ಇದರ ಜೊತೆಗೆ ಜನೌಷಧಿ ಕೇಂದ್ರವನ್ನು ಪ್ರಾರಂಭ ಮಾಡಿದ್ದಾರೆ. ಬೇರೆ ಓಷಧ ಮಳಿಗೆಗಳಲ್ಲಿ ಓಷಧದ ಬೆಲೆ ನೂರು ರೂ. ಇದ್ದರೆ ಜನೌಷಧಿ ಕೇಂದ್ರಗಳಲ್ಲಿ 20 ರೂ.ಗೆ ಸಿಗುತ್ತದೆ. ರಾಜ್ಯ ಸರ್ಕಾರ ಎಲ್ಲ ಆಸ್ಪತ್ರೆಗಳ ಬಳಿ ಜನೌಷಧಿ ಕೇಂದ್ರ ಸ್ಥಾಪನೆ ಮಾಡಬೇಕು.ಗ್ರಾಮಗಳ ಅಭಿವೃದ್ದಿಗೆ ಐದು ಹಂತದ ಸಂಸ್ಥೆಗಳು ಗ್ರಾಮ ಪಂಚಾಯತಿ, ತಾಲೂಕು, ಜಿಲ್ಲಾ, ಶಾಸಕರು ಹಾಗೂ ಸಂಸದರು ಐದು ಹಂತದ ಸಂಸ್ಥೆಗಳು ಒಟ್ಟಿಗೆ ಕೆಲಸ ಮಾಡಬೇಕು. 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ ಕೆಲಸ ಮಾಡಿ ಒಂದು ತಿಂಗಳು ರಾಜಕಾರಣ ಮಾಡೋಣ ಎಂದರು. ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರ್ಪ ಲಮಾಣಿ ಮಾತನಾಡಿ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರ ಬಹುಮುಖ್ಯವಾಗಿದೆ.ಈ ಗ್ರಾಮಕ್ಕೆ ಹೆಚ್ಚು ಅನುದಾನ ನೀಡಲಾಗಿದೆ.ಮಾದರಿ ಗ್ರಾಮ ಮಾಡುವ ಸಂಕಲ್ಪ ಮಾಡಲಾಗಿದೆ.ಎಲ್ಲರ ಸಹಕಾರದಿಂದ ಅಭಿವೃದ್ಧಿ ಮಾಡೋಣ ಎಂದರು.
ಈ ಸಂಧರ್ಭದಲ್ಲಿ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ,ಗ್ರಾಪಂ ಆಡಳಿತಾಧಿಕಾರಿ ಜಿ.ಕೆ ಪಮ್ಮಾರ ಮುಖಂಡರಾದ ಪರಮಯ್ಯಸ್ವಾಮಿ ಹಿರೇಮಠ,ಫಕ್ಕಿರಯ್ಯ ಕೆಂಭಾವಿಮಠ,ಬಿ.ಡಿ ಕೊಳೂರ, ಮಲ್ಲಪ್ಪ ಸೋಮಸಾಗರ,ಪರಶುರಾಮ ಹರ್ಲಾಪುರ,ತಾಪಂ ಮಾಜಿ ಅಧ್ಯಕ್ಷರಾದ ತಿಪ್ಪಣ್ಣ ಸುಬ್ಬಣ್ಣನವರ,ಗ್ರಾಪಂ ಮಾಜಿ ಸದಸ್ಯರಾದ ನಿಂಗಪ್ಪ ಆರೇರ,ಮಂಜುನಾಥ ಕಲ್ಲನಗೌಡ್ರ,ಮರಿಯಪ್ಪ ನಡುವಿನಮನಿ,ಈರಣ್ಣ ಚಪ್ಪರದಹಳ್ಳಿಮಠ,ಸಿದ್ದನಗೌಡ್ರ ಕುಲಕರ್ಣಿ,ಮಂಜು ಮಾಲಿ,ಬಸವರಾಜ ಸೋಮಸಾಗರ,ಶಂಭಣ್ಣ ಆರೇರ,ಮಾಲತೇಶ ತಳವಾರ,ಮೃತ್ಯಂಜಯ ಮುಷ್ಠಿ,ತಿರಕಪ್ಪ ಬಾರ್ಕಿ,ಶರಣಪ್ಪ ಸೋಮಸಾಗರ ಸೇರಿದಂತೆ ವಿವಿಧ ಗ್ರಾಪಂಗಳ ಮಾಜಿ ಸದಸ್ಯರು,ಊರಿನ ಗಣ್ಯರು,ಸೂಸೈಟಿಯ ಪದಾಧಿಕಾರಿಗಳು,ಆರೋಗ್ಯ ಇಲಾಖೆಯ ಮತ್ತು ಗ್ರಾಪಂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 