ಹುಲಗೂರು ಗ್ರಾಮದಲ್ಲಿ 60 ಲಕ್ಷ ವೆಚ್ಚದಲ್ಲಿ ಪ್ರೌಢಶಾಲೆ, ಗ್ರಂಥಾಲಯ ಕಟ್ಟಡದ ಕಾಮಗಾರಿಗೆ ಶಂಕುಸ್ಥಾಪನೆ
Foundation stone laid for high school and library building at a cost of Rs. 60 lakhs in Hulaguru vil
ಶಿಗ್ಗಾವಿ 12 : ಸುಮಾರು ವರ್ಷದಿಂದ ಅನಧೀಕೃತವಾಗಿ ಮನೆ ಕಟ್ಟಿಕೊಂಡ ಬಡವರಿಗೆ ಸಕ್ರಮಗೊಳಿಸಿ, ಹಕ್ಕುಪತ್ರ ವಿತರಣೆಗೆ ಕ್ರಮವಹಿಸಿದರೇ, ವಿರೋಧಿಸಿ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಸಕ್ರಮಕ್ಕೆ ಕ್ರಮಕೈಗೊಂಡ ಪಿಡಿಓ ಅವರನ್ನು ಅಮಾನತ ಮಾಡಲು ಆಗ್ರಹಿಸಿದವರ ಹೆಸರು ಮುಂದಿನ ಸಭೆಯಲ್ಲಿ ಬಹಿರಂಗಪಡಿಸುವುದಾಗಿ ಶಾಸಕ ಯಾಸೀರಖಾನ್ ಪಠಾಣ ಹೇಳಿದರು. ತಾಲೂಕಿನ ಹುಲಗೂರು ಗ್ರಾಮದಲ್ಲಿ 60 ಲಕ್ಷ ವೆಚ್ಚದಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡ, ಉರ್ದು ಪ್ರೌಢಶಾಲೆ, ಗ್ರಂಥಾಲಯ ಕಟ್ಟಡದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಶಾಸಕನಾದವ ರಾಜನಲ್ಲ. ಜನರ ಮತ ಭಿಕ್ಷೆಯಿಂದ ನಾನು ಶಾಸಕನಾಗಿದ್ದೇನೆ ಅಷ್ಟೇ.
ನಿಮ್ಮ ಆರ್ಶೀವಾದದಿಂದ ತಮ್ಮ ಅಧಿಕಾರ ಅವಧಿಯಲ್ಲಿ ಸಾಧ್ಯವಾದಷ್ಟು ಈ ಕ್ಷೇತ್ರದ ಜನರ ಸೇವೆ ಮಾಡಿ, ಋಣ ತೀರಿಸುಸುವ ಕೆಲಸ ಮಾಡುತ್ತೇನೆ. ಬಡವರಿಗಾಗಿ ಉಪಕಾರ ಮಾಡುತ್ತಿರುವ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಎಷ್ಟೇ ವಿರೋಧ ಮಾಡಲಿ,ಹೋರಾಟ ನಡೆಸಲಿ ಅನಧಿಕೃತ ಮನೆ ಕಟ್ಟಿಕೊಂಡ ಬಡವರಿಗೆ ಹಕ್ಕುಪತ್ರ ಕೊಡುವ ಕೆಲಸ ಮಾಡುತ್ತೇನೆ ಎಂದರು.ಭಗವಂತ ಕೊಟ್ಟ ಸಮಯ ಜನರ ಸೇವೆ ಮಾಡಲು ಸಾಲುತ್ತಿಲ್ಲ. ಇರುವ ಸಮಯದಲ್ಲೇ ಅನುದಾನ ತಂದು ಈ ಕ್ಷೇತ್ರದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜನರ ಬದುಕು ಹಸನಗೊಳಿಸುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ.
ಕ್ಷೇತ್ರದಲ್ಲಿ ಅನಧಿಕೃತ ಮನೆ ಕಟ್ಟಿಕೊಂಡ 20 ಸಾವಿರ ಜನರಿಗೆ ಹಕ್ಕು ಪತ್ರಗಳನ್ನು ನೀಡಿ ಅವರ ಋಣ ತೀರಿಸುತ್ತೇನೆ. ವಿರೋಧಿಸಲು ಯಾವ ಹಾದಿಯಲ್ಲಿ ಬರುತ್ತಾರೆ ಬರಲಿ ನಾನು ನೋಡಿಕೊಳ್ಳುತ್ತೇನೆ ಎಂದು ಗುಡಗಿದರು.ಗ್ರಾಪಂ.ಅಧ್ಯಕ್ಷ ಜಾವೀಧ ಸವಣೂರ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲದಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ಪ್ರೇಮಾ ಪಾಟೀಲ, ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ. ಎಸ್.ಎಫ್.ಮಣಕಟ್ಟಿ, ಅಂಜುಮನ್ ಸಂಸ್ಥೆ ಅಧ್ಯಕ್ಷ ರಿಯಾಜ್, ಈಸೂಫ್ ಭಾವಿಕಟ್ಟಿ, ಫಕ್ಕೀರ್ಪ ಕುರಬರ, ಮಲ್ಲಮ್ಮ ಸೋಮನಕಟ್ಟಿ, ಶಂಕರಗೌಡ ಪಾಟೀಲ, ರುದ್ರಣ್ಣ, ಹಾಧಿಮನಿ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 