ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ
Foundation stone laid for new boys' hostel building
ಸವದತ್ತಿ 09 : ಪಟ್ಟಣದ ರಾಘವೇಂದ್ರ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಒಟ್ಟು 4 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡಕ್ಕೆ ಶಾಸಕ ವಿಶ್ವಾಸ ವೈದ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. ತಾಲೂಕು ಆಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಲಭಿಸಬೇಕು ಎಂಬ ಉದ್ದೇಶದಿಂದ ಸರ್ಕಾರವು ಇಂತಹ ಸುಸಜ್ಜಿತ ವಸತಿ ನಿಲಯಗಳನ್ನು ನಿರ್ಮಿಸುತ್ತಿದೆ.
ವಿದ್ಯಾರ್ಥಿಗಳು ಕೇವಲ ಸೌಲಭ್ಯಗಳನ್ನು ಪಡೆಯುವುದಷ್ಟೇ ಅಲ್ಲದೆ, ಅವುಗಳನ್ನು ಸದುಪಯೋಗಪಡಿಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಲು ಹೆಚ್ಚಿನ ಆದ್ಯತೆ ನೀಡಬೇಕು, ಎಂದು ಕರೆ ನೀಡಿದರು.ಜೀವನದಲ್ಲಿ ಶಿಸ್ತು ಮತ್ತು ಕಠಿಣ ಪರಿಶ್ರಮವಿದ್ದರೆ ಮಾತ್ರ ಉನ್ನತ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಮಾತನಾಡಿ ವಿದ್ಯಾರ್ಥಿಗಳು ಸಮಯಪ್ರಜ್ಞೆ ಬೆಳೆಸಿಕೊಂಡು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.ಇದೇ ವೇಳೆ ತಾಪಂ ಅಧಿಕಾರಿ ಇಒ (ಪ್ರಭಾರಿ) ಎಚ್.ಎ.ಕದ್ರಾಪೂರಕರ, ಶ್ರೀಮತಿ ರತ್ನಾ ಕದಂ,ಆರ್.ಆರ್.ಕುಲಕರ್ಣಿ, ಸಿಡಿಪಿಒ ಅಮೃತ ಸಾಣಿಕೊಪ್ಪ, ವೀರಭದ್ರಗೌಡ ಪಾಟೀಲ, ವಿಜಯ ಆಸಂಗಿ,ಹಾಸೀಂ ತಹಶೀಲ್ದಾರ, ಮಾರುತಿ ಬಸಲಿಗುಂದಿ, ಬಿ.ಎನ್.ಪ್ರಭುನವರ,ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ನಗರಸಭೆ ಸದಸ್ಯರು ಪ್ರಮುಖ ಮುಖಂಡರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 