ವೇದಾಂತಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಮಂದಿರ ನಿರ್ಮಾಣಕ್ಕೆ ಶಿಲಾಪೂಜೆ
Foundation stone laying ceremony for the construction of the shrine of Vedantakesari Mallikarjuna Sh
ಲೋಕದರ್ಶನ ವರದಿ
ಜಮಖಂಡಿ 10: ತಾಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ವೇದಾಂತಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಮಂದಿರದ ಗರ್ಭಗುಡಿ ನಿರ್ಮಾಣಕ್ಕೆ ಶುಕ್ರವಾರ ಶಿಲಾಪೂಜೆ ನೆರವೇರಿಸಲಾಯಿತು.
ಮುಧೋಳ ತಾಲೂಕಿನ ಶಿರೋಳ ಗ್ರಾಮದ ರಾಮಾರೂಢ ಮಠದ ಶಂಕರಾರೂಢ ಮಹಾಸ್ವಾಮೀಜಿಗಳು ವೇದಮಂತ್ರೋಚ್ಚಾರಣೆಯೊಂದಿಗೆ ಶಿಲಾಪೂಜೆಯನ್ನು ನೆರವೇರಿಸಿದರು. ಶ್ರೀಗುರುದೇವಾಶ್ರಮದ ಹರ್ಷಾನಂದ ಮಹಾಸ್ವಾಮೀಜಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಋಷಿಕೇಶದ ಗಂಗಾಧರ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು.
ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಮಹಾಸ್ವಾಮೀಜಿಗಳ ಸಂಕಲ್ಪದಂತೆ, ಅವರ ಗುರುಗಳಾದ ವೇದಾಂತಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಗರ್ಭಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರನ್ನು ವಸ್ತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ. ಬಸವರಾಜ ಕಡ್ಡಿ, ಪ್ರಾಚಾರ್ಯ ಡಾ. ಟಿ.ಪಿ. ಗಿರಡ್ಡಿ, ಲೋಕನಾಥ ತೊಳಮಟ್ಟಿ, ಯಲ್ಲಪ್ಪ ಶಿವಾಪುರ, ಸಿದ್ರಾಯ ಅಳ್ಳಿಮಟ್ಟಿ, ಶ್ರೀಶೈಲ ಸುಣಗದ, ರುದ್ರ್ಪ ಮರೇಗುಡ್ಡಿ, ಮಲ್ಲಪ್ಪ ಕೋರಿ, ಗಣಪತಿ ಗಲಗಲಿ, ಉಮೇಶ ಕೋರಿ, ನಿಂಗಪ್ಪ ಹುಣಸಿಕಟ್ಟಿ, ರಾಜು ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 