ಧಾರವಾಡ ಜಿಲ್ಲೆಯಲ್ಲಿ ನಾಲ್ಕು ಕೊರೊನಾ ಸೋಂಕಿತರು ಪತ್ತೆ
ಧಾರವಾಡ, ಮೇ.17,ಧಾರವಾಡ ಜಿಲ್ಲೆಯಲ್ಲಿ ಇಂದು ನಾಲ್ಕು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಪೀಡಿತ-1123 (39,ಪುರುಷ) ಮಹಾರಾಷ್ಟ್ರದ ಮುಂಬೈ ಪ್ರಯಾಣ ಹಿನ್ನೆಲೆ, ಪೀಡಿತ -1124( 16, ಬಾಲಕ) ಇವರು ಪೀಡಿತ -589 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರು. ಪೀಡಿತ- 1142 ( 28, ಮಹಿಳೆ) ಮಹಾರಾಷ್ಟ್ರ, ಮುಂಬೈ ಪ್ರಯಾಣ ಹಿನ್ನೆಲೆ, ಪೀಡಿತ- -1143 ( 25, ಪುರುಷ) ಮಹಾರಾಷ್ಟ್ರದ ಕೊಲ್ಹಾಪುರ ಪ್ರಯಾಣ ಹಿನ್ನೆಲೆ ಹೊಂದಿದವರಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಈಗಾಗಲೇ 07 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 