ರಾಜ್ಯದಲ್ಲಿ 4 ಹೊಸ ಪ್ರಕರಣ ಪತ್ತೆ, ಕೊರೋನಾ ಸೋಂಕಿತರ ಸಂಖ್ಯೆ 105ಕ್ಕೇರಿಕೆ
ಬೆಂಗಳೂರು, ಏ1,ರಾಜ್ಯದಲ್ಲಿ ಬುಧವಾರ 4 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 105ಕ್ಕೇರಿಕೆಯಾಗಿವೆ. ಬೆಂಗಳೂರಿನ 24 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಈತನ ಹೆಚ್ಚಿನ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಜೊತೆಗೆ, 52 ನೇ ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ ನಂಜನಗೂಡಿನ 37 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಇವರು ನಂಜನಗೂಡಿನ ಔಷಧ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಇವರಿಬ್ಬರಲ್ಲಿ ಓರ್ವ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 33 ವರ್ಷದ ಬೆಂಗಳೂರು ಜಿಲ್ಲೆಯ ನಿವಾಸಿಗೆ ಕೂಡ ಸೋಂಕು ತಗುಲಿದೆ.ಇವರೆಲ್ಲರನ್ನೂ ಪ್ರತ್ಯೇಕ ಆಸ್ಪತ್ರೆಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, 9 ಜನರು ಚೇತರಿಸಿಕೊಂಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 