ಬಾವಿಗೆ ಕಾರು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು
Four of Family Killed as Car Plunges into Well in Telangana
ಸಿದ್ದಿಪೇಟೆ, ಆ. 20 : ಎರಡು ಪುಟ್ಟ ಮಕ್ಕಳೂ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಬಾವಿಗೆ ಬಿದ್ದ ಪರಿಣಾಮ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ದುಬ್ಬಾಕ ಮಂಡಲದ ಅಪ್ಪನಪಳ್ಳಿಯಲ್ಲಿ ನಡೆದಿದೆ.
ಮೃತರನ್ನು ಬಲವಂತಪುರ ಗ್ರಾಮದ ನಿವಾಸಿಗಳಾದ ರಾಜು (30), ಅವರ ಪತ್ನಿ ಭಾಗ್ಯ (25), ಪುತ್ರ ನಿಯಾನ್ಶ್ (4) ಹಾಗೂ ಪುತ್ರಿ ಸಾನ್ವಿಕಾ (2) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಕುಟುಂಬವು ಬುಧವಾರ ಸಂಜೆ ಸಿದ್ದಿಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕುಟುಂಬಸ್ಥರು ಮನೆಗೆ ತಲುಪದಿರುವುದು ಹಾಗೂ ಅವರನ್ನು ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಮೊಬೈಲ್ ಫೋನ್ ಸಿಗ್ನಲ್ ಆಧರಿಸಿ ಅಪ್ಪನಪಳ್ಳಿ ಹೊರವಲಯದಲ್ಲಿ ಕುಟುಂಬದ ಇರುವಿಕೆಯನ್ನು ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ತೆರಳಿದಾಗ ಕಾರು ಬಾವಿಗೆ ಬಿದ್ದಿರುವುದು ಕಂಡುಬಂದಿದ್ದು, ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು.
ಕಾರಿನಲ್ಲಿದ್ದ ರಾಜು, ಭಾಗ್ಯ ಹಾಗೂ ಇಬ್ಬರು ಮಕ್ಕಳ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 