ಫೆ. 2ರಂದು ಜೆ.ಪಿ. ನಾರಾಯಣಸ್ವಾಮಿಯವರ ಜನ್ಮ ದಿನಾಚರಣೆ

ಲೋಕದರ್ಶನ ವರದಿ

ಕೊಪ್ಪಳ 29: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದ ಆರ್ಯ ಈಡಿಗ ಮಹಾಸಂಸ್ಥಾನ ಆವರಣದಲ್ಲಿ ಫೆ. 02ರಂದು ಶ್ರೀ ಜೆ.ಪಿ.ನಾರಾಯಣಸ್ವಾಮಿಯವರ 68ನೇ ಹುಟ್ಟುಹಬ್ಬ ಮತ್ತು ಪ್ರತಿಷ್ಠಾನದ ಪ್ರಥಮ ವಾಷರ್ಿಕೋತ್ಸವ ಸಮಾರಂಭ ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಆರ್ಯ ಈಡಿಗ ಸಮಾಜದ ಪ್ರಮುಖ ರಾಘವೇಂದ್ರರಾವ್ ಹುಯಿಲಗೋಳ ಹೇಳಿದರು.

ಅವರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯಲಿರುವ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದ ಅವರು, ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 4 ರಿಂದ 5 ವಾಹನಗಳು ಸೇರಿ ನೂರಾರು ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದರು.  ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾದ ನಾಡೋಜ ಡಾ. ಹಂಪ ನಾಗರಾಜಯ್ಯರವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿಗಳಾದ ಎಂ.ಕೆ.ನಾಯಕ್, ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ. ಎಂ.ತಿಮ್ಮೇಗೌಡರ, ಲೋಕಸೇವಾ ಆಯೋಗದ ಸದಸ್ಯ ಡಾ. ಲಕ್ಷ್ಮೀ ನರಸಯ್ಯ, ಆರ್ಯ ಈಡಿಗ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ನಳಿನಾಕ್ಷಿ ಸಣ್ಣಪ್ಪನವರು ಪಾಲ್ಗೊಳ್ಳುವರು. ಜೆ.ಪಿ.ಎನ್. ಪ್ರಶಸ್ತಿ ಪುರಸ್ಕೃತರಾಗಿ ಕೇಂದ್ರದ ಮಾಜಿ ಸಚಿವರು ಹಾಗೂ ಡಿ.ದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ಆರ್.ಎಲ್.ಜಾಲಪ್ಪಾಜಿ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೇ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರಿಗೆ ಸನ್ಮಾನಿಸಲಾಗುವುದು ಎಂದು ಆರ್ಯ ಈಡಿಗ ಸಮಾಜದ ಪ್ರಮುಖ ರಾಘವೇಂದ್ರರಾವ್ ಹುಯಿಲಗೋಳ ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಆರ್ಯ ಈಡಿಗ ಸಮಾಜದ ಜಿಲ್ಲಾ ಸಂಚಾಲಕರಾದ ಎ.ವಿ.ರವಿ, ಇ.ಅನಿಲ್ಕುಮಾರ ಹುಲಿಗಿ, ಕಿರಣಕುಮಾರ ಗಂಗಾವತಿ ಮತ್ತೀತರರು ಉಪಸ್ಥಿತರಿದ್ದರು.