ಫೆ. 01ರಂದು ಅರ್ಥಪೂರ್ಣ ಮಡಿವಾಳ ಮಾಚಿದೇವರ ಜಯಂತಿ ಆಚರಣೆಗೆ ನಿರ್ಧಾರ

ಕೊಪ್ಪಳ 28: ಫೆಬ್ರವರಿ. 01 ರಂದು ಮಡಿವಾಳ ಮಾಚಿದೇವರ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವ ಅವರ ಜಯಂತಿ ಆಚರಣೆ ಕುರಿತಾಗಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಡಿವಾಳ ಮಾಚಿದೇವರ ಜಯಂತಿ ಅಂಗವಾಗಿ ಫೆ. 01 ರಂದು ಬೆಳಿಗ್ಗೆ 09 ಗಂಟೆಗೆ ಗಡಿಯಾರ ಕಂಬದ ಹತ್ತಿರವಿರುವ ಅಕ್ಕಮಹಾದೇವಿ ದೇವಸ್ಥಾನದಿಂದ ಸಾಹಿತ್ಯ ಭವನದವರೆಗೆ ಮಡಿವಾಳ ಮಾಚಿದೇವ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ನಂತರ ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬಳ್ಳಾರಿ ತಾಲ್ಲೂಕಿನ ಭರಮದೇವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎ.ಆರ್. ಮಂಜುನಾಥ ಮಡಿವಾಳ ಮಾಚಿದೇವರ ಕುರಿತು ವಿಶೇಷ ಉಪನ್ಯಾಸ ನೀಡುವರು. ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಅಂದು ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಕಾರ್ಯಕ್ರಮ ದಿನದಂದು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯವರು ಕೈಗೊಳ್ಳಬೇಕು.  ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ಅವರು, ಎಲ್ಲಾ ಸಮಾಜ ಬಾಂಧವರು, ಸಾರ್ವಜನಿಕರು ಮೆರವಣಿಗೆ ಹಾಗೂ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.  

ಸಭೆಯಲ್ಲಿ ತಹಶೀಲ್ದಾರ್ ಜೆ.ಬಿ.ಮಜ್ಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ಕೆ. ರಂಗಣ್ಣವರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದರ್ೇಶಕ ರಾಟಿಮನಿ, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆಯ ಹೊನ್ನೂರಪ್ಪ, ಸಮಾಜದ ಮುಖಂಡರಾದ ದುರಗೇಶ, ಗವಿಸಿದ್ದಪ್ಪ, ಶಂಕ್ರಪ್ಪ ಮಡಿವಾಳರ, ನಾಗರಾಜ ಬಿ ಮಡಿವಾಳರ, ಹುಲಿಗಪ್ಪ ಮಡಿವಾಳರ, ರಾಮಣ್ಣ ಮಡಿವಾಳರ, ಅಮರೇಶ ಮಡಿವಾಳರ, ವಾಸು ಮಡಿವಾಳರ, ಸಿ.ವಿ. ಮಡಿವಾಳರ, ನಾಗರಾಜ ಮಡಿವಾಳರ, ಮಹೇಶ ಮಡಿವಾಳರ, ಮಲ್ಲಪ್ಪ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಫೆ. 04ರಂದು ಅರ್ಥಪೂರ್ಣ ಸವಿತಾ ಮಹರ್ಷಿ  ಜಯಂತಿ ಆಚರಣೆಗೆ ನಿರ್ಧಾರ: ಸವಿತಾ ಮಹರ್ಷಿ  ಅವರ ಜಯಂತಿಯನ್ನು ಫೆ. 04 ರಂದು ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದರು.

ಸವಿತಾ ಮಹರ್ಷಿ  ಅವರ ಜಯಂತಿಯನ್ನು ಫೆಬ್ರವರಿ. 04 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಚರಿಸಲಾಗುವುದು. ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸವಿತಾ ಮಹರ್ಶಿ  ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.  ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಅಂದು ಸವಿತಾ ಮಹಷರ್ಿ ಅವರ ಜಯಂತಿ ಆಚರಿಸುವಂತೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕಾರ್ಯಕ್ರಮದ ದಿನದಂದು, ರಸ್ತೆ ಸ್ವಚ್ಛತೆ, ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯವರು ಕೈಗೊಳ್ಳಬೇಕು. ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ  ಸೂಚನೆ ನೀಡಿದ ಅವರು ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.