ಉಚಿತ ದಂತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
Free Dental Health Check-up and Treatment Camp
ರಾಣೆಬೆನ್ನೂರು ೨೪ : ನಗರದ ಮೆಡ್ಲೇರಿ ರಸ್ತೆ, ಲಯನ್ಸ್ ಶಾಲಾ ಸಭಾಭವನದಲ್ಲಿ ಶನಿವಾರ ಸಾರ್ವಜನಿಕರಿಗಾಗಿ ಉಚಿತ ದಂತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.
ಲಯನ್ಸ್ ಕ್ಲಬ್ ದಾವಣಗೆರೆ ಎಸ್.ಎಸ್.ಕೆ. ಟ್ರಸ್ಟ್, ಬಾಪೂಜಿ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಡಾ. ಉಷಾ ಜಿ.ವಿ., ಪರಿಪೂರ್ಣ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಬಾಯಿ ಮತ್ತು ವಸಡುಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಬಾಯಿ ಮತ್ತು ವಸಡಿನ ಸಣ್ಣಪುಟ್ಟ ಸಮಸ್ಯೆಗಳನ್ನು ನಿರ್ಲಕ್ಷಿಸಿದರೂ ಅವು ಮುಂದೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಮಕ್ಕಳಲ್ಲಿ ಹಲ್ಲು ಮತ್ತು ವಸಡುಗಳ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿರುವುದರಿAದ ಪೋಷಕರು ಹಾಗೂ ವಿದ್ಯಾರ್ಥಿಗಳು ದಂತ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಶಾಲಾ ಮಕ್ಕಳು ಪ್ರತಿದಿನ ಕಡ್ಡಾಯವಾಗಿ ಹಲ್ಲುಗಳನ್ನು ಸ್ವಚ್ಛವಾಗಿ ಉಜ್ಜಬೇಕು. ಆಹಾರ ಸೇವಿಸಿದ ನಂತರ ಆಹಾರ ಕಣಗಳು ಹಲ್ಲುಗಳ ನಡುವೆ ಉಳಿಯದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಲ್ಲುಗಳ ಸರಿಯಾದ ಪಾಲನೆ ಹಾಗೂ ಪೋಷಣೆಯ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮಲ್ಲೇಶಪ್ಪ ಅರಕೇರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಲಯನ್ಸ್ ಸಂಸ್ಥೆಯ ಎನ್.ಎಸ್. ಕುಲಕರ್ಣಿ, ಟಿ. ವೀರಣ್ಣ, ಟಿ.ಸಿ. ಪಾಟೀಲ್, ಕೋಟ್ರೇಶಪ್ಪ ಎಮ್ಮಿ, ಡಾ. ಅಮೃತ್, ಡಾ. ಸಂಜಯ ನಾಯಕ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಶಿಬಿರದಲ್ಲಿ ನೂರಾರು ನಾಗರಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಉಚಿತ ದಂತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯ ಸದುಪಯೋಗ ಪಡೆದುಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 