ಉಚಿತ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮ
ಲೋಕದರ್ಶನ ವರದಿ
ಬ್ಯಾಡಗಿ10: ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂವಿಧಾನದ ಆಶಯ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಕರ್ಾರದ ಯೋಜನೆಯ ಲಾಭ ದೊರೆಯುವಂತಾಗಬೇಕು ಅಂದಾಗ ಮಾತ್ರ ಸಕರ್ಾರದ ಅಭಿವೃದ್ಧಿ ಮಾನದಂಡ ಪರಿಗಣಿಸಬಹುದಾಗಿದೆ ಎಂದು ತಾಲ್ಲೂಕ ಪಂಚಾ ಯತ್ ಅಧ್ಯಕ್ಷೆ ಸವಿತಾ ಸುತ್ತಕೋಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕ ಪಂಚಾಯತ್ ಆವರಣದಲ್ಲಿ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಬಳಿಕ ಮಾತನಾಡಿ ಚುನಾವಣೆ ಪ್ರಣಾ ಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದಾಗ ಮಾತ್ರ ಜನಪ್ರತಿನಿಧಿಗಳಿಗೆ ಗೌರವ ಸಿಗಲಿದೆ ಬಡವರು, ರೈತರಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ, ಯುವ ಸಮುದಾಯಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾಥರ್ಿಗಳಿಗೆ ಸೇರಿದಂತೆ ಸಮಾಜದಲ್ಲಿರುವ ನೊಂದ ಜನತೆಗೆ ಅಭಯ ಹಸ್ತ ಚಾಚುವಂತಹ ಕೆಲಸವಾಗಬೇಕಾಗಿದೆ ಎಂದರು.
ಯಾವುದೇ ಅಭಿವೃದ್ಧಿ ಕಾಮಗಾರಿಗಳು ಚುನಾವಣೆ ಗಿಮಿಕ್ ಆಗಬಾರದು ಕಾಯಾ-ವಾಚಾ-ಮನಸಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಮಾ ಡುವ ಮೂಲಕ ಸಕರ್ಾರದ ಮೇಲೆ ಜನರಿಟ್ಟಿದ್ದ ನಂಬಿಕೆಗಳನ್ನು ಯಾವುದೇ ಕಾರಣಕ್ಕೂ ಹುಸಿಗೊಳಿಸದಂತೆ ನೋಡಿಕೊಳ್ಳಬೇಕಾಗುತ್ತದೆ ಎಂದರು. ಈ ಸಂದರ್ಭದಲ್ಲಿ ತಾಲ್ಲೂಕ ಪಂಚಾಯತ್ ಉಪಾಧ್ಯಕ್ಷೆ ಶಾಂತಮ್ಮ ದೊಡ್ಮನಿ, ಹನುಮಂತಪ್ಪ ಇನ್ನಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 